ಸೋಮವಾರ, ಅಕ್ಟೋಬರ್ 3, 2022
24 °C

ಚಂದನವನದ ಹಾಸ್ಯ ನಟ ಸಾಧು ಕೋಕಿಲ ಸಾಮಾಜಿಕ ಮಾಧ್ಯಮಗಳಿಗೆ ಎಂಟ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಂದನವನದ ಹಾಸ್ಯ ಕಲಾವಿದ ಸಾಧು ಕೋಕಿಲ ಸಾಮಾಜಿಕ ಮಾಧ್ಯಮಗಳಿಗೆ ಎಂಟ್ರಿ ಕೊಟ್ಟಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಿಮ್ಮ ಪ್ರೀತಿಯಿಂದ ಸಾಮಾಜಿಕ ಜಾಲತಾಣಕ್ಕೆ ಬಂದಿದ್ದೇನೆ. ಹೆಚ್ಚಿನ ಅಪ್ಡೇಟ್‌ ತಿಳಿದುಕೊಳ್ಳಲು ದಯವಿಟ್ಟು ನನ್ನ ಫಾಲೋ ಮಾಡಿ! ಎಂದು ಸಾಧು ಕೋಕಿಲ ಬರೆದುಕೊಂಡಿದ್ದಾರೆ.

ಅವರು ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ ಹಾಗೂ ಟ್ವಿಟ್ಟರ್‌ ಖಾತೆಗಳನ್ನು ತೆರೆದಿದ್ದಾರೆ. 

ಸದ್ಯ ಸಾಧು ಕೋಕಿಲ ಅವರು ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಇದನ್ನೂ ಓದಿ: ತಾಯಿಯಾಗುತ್ತಿರುವ ಸಂಭ್ರಮದಲ್ಲಿ ಬಿಪಾಶಾ ಬಸು: ‘ಬೇಬಿ ಬಂಪ್‘ ಫೋಟೊ ಹಂಚಿಕೊಂಡ ನಟಿ

ಸಾಧು ಕೋಕಿಲ ಅವರು ಕನ್ನಡದ ವಿವಿಧ ಟಿ.ವಿಗಳಲ್ಲಿ ಪ್ರಸಾರವಾಗುವ ಕೆಲವು ಕಾರ್ಯಕ್ರಮಗಳಿಗೆ ಜಡ್ಜ್‌ ಆಗಿಯೂ ಕೆಲಸ ಮಾಡುತ್ತಿದ್ದಾರೆ. ನಟನೆ ಮತ್ತು ಚಿತ್ರಗಳಿಗೆ ಸಂಗೀತ ನೀಡುವುದರಲ್ಲೂ  ಸಾಧು ಅವರು ಸಕ್ರಿಯರಾಗಿದ್ದಾರೆ.

ಇವುಗಳನ್ನೂ ಓದಿ

ಧನಂಜಯ್‌, ರಚಿತಾ ನಟನೆಯ ‘ಮಾನ್ಸೂನ್‌ ರಾಗ’ ರಿಲೀಸ್‌ ಮುಂದಕ್ಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು