ದೀರ್ಘ ಕಾಲದ ನಂತರ ನಿರ್ದೇಶನಕ್ಕೆ ಮರಳಿದ್ದಾರೆ ಓಂಪ್ರಕಾಶ್ರಾವ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸುತ್ತಿರುವ ಓಂ ಪ್ರಕಾಶ್ರಾವ್ ನಿರ್ದೇಶನದ 49ನೇ ಚಿತ್ರ ‘ಚಂದ್ರಲೇಖ ರಿಟರ್ನ್ಸ್’.

ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಶ್ರೀವಿನಾಯಕ ದೇವಸ್ಥಾನದಲ್ಲಿ ನಡೆದಿದೆ. ಚಿತ್ರ ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿದೆ ಎಂದಿದೆ ಚಿತ್ರತಂಡ.

ಶ್ರೀ ಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ. ಈ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರವೀಶ್ ಅವರ ನಿರ್ಮಿಸಿರುವ ‘ಕಸ್ತೂರಿ ಮಹಲ್’ ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದೆ.

ಡಾರ್ಲಿಂಗ್ ಕೃಷ್ಣ ಅವರೊಂದಿಗೆ ಸಾಧುಕೋಕಿಲ, ನಾಗಶೇಖರ್, ವಿವಿನ್ ಸೂರ್ಯ, ಅಚ್ಯುತರಾವ್, ಸುಧಾ ಬೆಳವಾಡಿ, ಪ್ರಶಾಂತ್ ಸಿದ್ದಿ ತಾರಾಬಳಗದಲ್ಲಿದ್ದಾರೆ.

ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ರವೀಶ್ ಆರ್.ಸಿ. ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.