ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ ನಲ್ಲಿ ಸೆಟ್ಟೇರಲಿದೆ ‘ಚಂದ್ರಲೇಖ ರಿಟರ್ನ್ಸ್’

Last Updated 17 ಏಪ್ರಿಲ್ 2022, 11:05 IST
ಅಕ್ಷರ ಗಾತ್ರ

ಓಂಪ್ರಕಾಶ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಅಭಿ ನಾಯಕ. ಭೂಮಿಕಾ ನಾಯಕಿ.

ಎನ್.ಓಂಪ್ರಕಾಶ್ ರಾವ್ ನಿರ್ದೇಶನದ ‘ಚಂದ್ರಲೇಖ ರಿಟರ್ನ್ಸ್’ ಚಿತ್ರದ ಚಿತ್ರೀಕರಣ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.

‘ಲವ್ ಮಾಕ್ಟೇಲ್’ ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕಾ ಎಲ್. ಮಧುಸೂದನ್ ಈ ಚಿತ್ರದ ನಾಯಕಿ. ಅನನ್ಯಾ ಪಂಡಿತ್, ರಂಗಾಯಣ ರಘು, ಅಚ್ಯುತಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಅವಿನಾಶ್, ಸುಚೀಂದ್ರ ಪ್ರಸಾದ್, ಚಿತ್ರ ಶೆಣೈ, ಸಂಗೀತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಓಂಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಓಂಪ್ರೊಡಕ್ಷನ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT