ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಲಿದ್ದಾರೆ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ಚಂದು

ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳ ಕಾಲ ಪ್ರಸಾರವಾಗಿ ಜನ ಮೆಚ್ಚುಗೆ ಗಳಿಸಿದ್ದ 'ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಚಂದು ಗೌಡಗೆ ಈಗ ಇನ್ನೊಂದು ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ. ಈ ಚಿತ್ರದಲ್ಲೂ ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರು ಜಾಕ್ಪಾಟ್ ಹೆಸರಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
‘ಜಾಕ್ಪಾಟ್ ನಂತರ ನಾನು ಪುನಃ ಪೊಲೀಸ್ ಅಧಿಕಾರಿಯಾಗಿ ನಟಿಸುತ್ತಿದ್ದೇನೆ. ಇದೊಂದು ಸೈಕಾಲಜಿಲ್ ಥ್ರಿಲರ್ ಸಿನಿಮಾ. ಒಂದು ಕೊಲೆಯ ರಸಹ್ಯವನ್ನು ಭೇದಿಸುವ ಡಿಸಿಪಿ ಆಗಿ ಕಾಣಿಸುತ್ತಿದ್ದೇನೆ. ಕಳೆದ 8–9ತಿಂಗಳುಗಳಿಂದ ಸಿನಿಮಾ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. ಇದರಲ್ಲಿ ಕಥೆಯೇ ನಾಯಕ’ ಎಂದು ಸಿನಿಮಾ ಹಾಗೂ ತಮ್ಮ ಪಾತ್ರದ ಕುರಿತು ವಿವರಣೆ ನೀಡುತ್ತಾರೆ ಚಂದು.
ಈ ಸಿನಿಮಾದಲ್ಲಿ ಸುಚೇಂದ್ರ ಪ್ರಸಾದ್, ಅಶ್ವತ್ ನೀನಾಸಂ, ಪ್ರಶಾಂತ್ ಸಿದ್ಧಿ ಮೊದಲಾದವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಶ್ರೀವಸ್ತಾ ಆರ್ ಹಾಗೂ ಸತ್ಯಸ್ರಯ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.