ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘777 ಚಾರ್ಲಿ’: ರಾಜ್ಯದಲ್ಲೇ ನೂರಕ್ಕೂ ಅಧಿಕ ಪ್ರೀಮಿಯರ್‌ ಶೋ!

Last Updated 7 ಜೂನ್ 2022, 9:46 IST
ಅಕ್ಷರ ಗಾತ್ರ

ರಕ್ಷಿತ್‌ ಶೆಟ್ಟಿ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘777 ಚಾರ್ಲಿ’ ಜೂನ್‌ 10ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಉತ್ತರ ಭಾರತದದೆಹಲಿ, ಅಹಮದಾಬಾದ್, ಕೋಲ್ಕತ್ತ ಸೇರಿದಂತೆ ವಿವಿಧ ಕಡೆ ಹಾಗೂ ವಿದೇಶದ ಕೆಲವೆಡೆ ಚಿತ್ರದ ಸೆಲೆಬ್ರಿಟಿ ಶೋಗಳು ನಡೆದಿವೆ. ಜೂನ್‌ 9ರಂದು ರಾಜ್ಯದೆಲ್ಲೆಡೆ ‘777 ಚಾರ್ಲಿ’ಯ ನೂರಕ್ಕೂ ಅಧಿಕ ಪ್ರೀಮಿಯರ್‌ಪ್ರದರ್ಶನ ನಡೆಯಲಿದೆ.

ಸಿನಿಮಾವೊಂದು ಬಿಡುಗಡೆಗು ಮುನ್ನವೇ ಇಷ್ಟೊಂದು ಪ್ರೀಮಿಯರ್‌ ಪ್ರದರ್ಶನ ಕಾಣುತ್ತಿರುವುದು ಇದೇ ಮೊದಲಾಗಿದೆ. ಸೋಮವಾರ ಚಿತ್ರದ ಸೆಲೆಬ್ರಿಟಿ ಪ್ರದರ್ಶನ ನಡೆದಿದ್ದು, ನಟಿ ರಮ್ಯ, ನಿರ್ದೇಶಕ ಸಂತೋಷ್‌ ಆನಂದರಾಮ್‌ ಸೇರಿದಂತೆ ನೂರಾರು ಸೆಲೆಬ್ರಿಟಿಗಳು ಈಗಾಗಲೇ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ.

‘ಕರ್ನಾಟಕದಲ್ಲಿ ಮುನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘777 ಚಾರ್ಲಿ’ ಬಿಡುಗಡೆ ಮಾಡುತ್ತಿದ್ದೇವೆ. ಈ ಚಿತ್ರದ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಜೂನ್ 9 ರಂದು 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗಾಗಿ ಪೂರ್ವಭಾವಿ ಪ್ರದರ್ಶನ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ 55 ಕಡೆ ಪ್ರದರ್ಶನ ನಡೆದರೆ, ಉಳಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರದರ್ಶನವಿರಲಿದೆ. ಮಲ್ಟಿಪ್ಲೆಕ್ಸ್ ಹಾಗೂ ಏಕಪರದೆ ಚಿತ್ರಮಂದಿರಗಳಲ್ಲೂ ಪೂರ್ವಭಾವಿ ಪ್ರದರ್ಶನ ನಡೆಯಲಿದೆ’ ಎಂದು ಕೆ.ಆರ್.ಜಿ ಫಿಲಂಸ್‌ನ‌ ಕಾರ್ತಿಕ್ ಗೌಡ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT