ನಟ ರಕ್ಷಿತ್ ಶೆಟ್ಟಿ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘777 ಚಾರ್ಲಿ’ ಬಿಡುಗಡೆ ಅಪ್‌ಡೇಟ್ಸ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ರಕ್ಷಿತ್ ಶೆಟ್ಟಿ ಅವರನ್ನು ಸತತವಾಗಿ ಪ್ರಶ್ನೆ ಕೇಳುತ್ತಲೇ ಇದ್ದರು. ಇದಕ್ಕೀಗ ರಕ್ಷಿತ್ ಉತ್ತರಿಸಿದ್ದು, ಏ.10ಕ್ಕೆ ಬೆಳಗ್ಗೆ 11.04ಕ್ಕೆ ಬಿಡುಗಡೆ ದಿನಾಂಕ ಘೋಷಿಸುವುದಾಗಿ ತಿಳಿಸಿದ್ದಾರೆ.

ಸಿನಿಮಾದ ಸೆನ್ಸಾರ್ ಪೂರ್ಣಗೊಂಡಿದ್ದು, ಚಿತ್ರಕ್ಕೆ ಯು/ಎ ಪ್ರಮಾಣಪತ್ರ ದೊರಕಿದೆ. ಪರಂವಃ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರವು ಕಳೆದ ಡಿ.31ಕ್ಕೇ ಬಿಡುಗಡೆಯಾಗಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆಯನ್ನು ಚಿತ್ರತಂಡವು ಮುಂದೂಡಿತ್ತು.

ಕೋವಿಡ್ ಮೂರನೇ ಅಲೆ, ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳ ಬಿಡುಗಡೆ ಚಿತ್ರ ಮುಂದೂಡಿಕೆಗೆ ಕಾರಣವಾಗಿತ್ತು. ಜುಲೈ 28ಕ್ಕೆ ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ.

ಹೀಗಾಗಿ ಮೇ ಅಂತ್ಯದಲ್ಲಿ ಅಥವಾ ಜೂನ್‌ನಲ್ಲಿ ‘777 ಚಾರ್ಲಿ’ ಬಿಡುಗಡೆ ಸಾಧ್ಯತೆ ಹೆಚ್ಚಾಗಿದೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ.

‘ಅಣ್ಣಾ ಬಾಂಡ್’ ನೋಡ್ತಿದ್ದಾನೆ ‘ಬಾಂಡ್ ರವಿ’!

ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ಚಿತ್ರದಲ್ಲಿ ನಟ, ನಿರ್ದೇಶಕ ರಾಜ್ ಬಿ.ಶೆಟ್ಟಿ, ಡ್ಯಾನಿಶ್ ಸೇಠ್ ತಾರಾಗಣದಲ್ಲಿದ್ದಾರೆ. ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕ.

ಶರ್ಟ್ಲೆಸ್ ಫೋಟೊ ಹಂಚಿಕೊಂಡ ಸಲ್ಮಾನ್ ಖಾನ್: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.