ಶುಕ್ರವಾರ, ಸೆಪ್ಟೆಂಬರ್ 24, 2021
24 °C

ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಡಿ.31ಕ್ಕೆ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ 2021ರ ಡಿ.31ರಂದು ತೆರೆ ಕಾಣಲಿದೆ. 

ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಚಿತ್ರದ ಮೊದಲ ವಿಡಿಯೊ ಹಾಡು ‘ಹೆಂಗೋ ಇದ್ದ ಧರ್ಮ, ತಗಲ್ಲಾಕ್ಕೋತು ಕರ್ಮ..’ ಗುರುವಾರ ಬಿಡುಗಡೆಯಾಗಿದ್ದು, 6 ನಿಮಿಷಗಳ ಹಾಡಿನಲ್ಲಿ ಧರ್ಮ ಮತ್ತು ಚಾರ್ಲಿ ನಡುವೆ ನಡೆಯಲಿರುವ ಟಾಮ್‌ ಆ್ಯಂಡ್‌ ಜೆರಿ ಆಟ, ಧರ್ಮನಿಗೆ ಚಾರ್ಲಿ ನೀಡುವ ಚಿತ್ರಹಿಂಸೆಯನ್ನು ಸೆರೆಹಿಡಿಯಲಾಗಿದೆ. ಜಿ.ಎಸ್‌.ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಸಂಗೀತಾ ಶೃಂಗೇರಿ ಚಿತ್ರದ ನಾಯಕಿ. ಚಿತ್ರದಲ್ಲಿ ನಟ, ನಿರ್ದೇಶಕ ರಾಜ್‌ ಬಿ.ಶೆಟ್ಟಿ, ಡ್ಯಾನಿಶ್‌ ಸೇಟ್‌ ತಾರಾಗಣದಲ್ಲಿದ್ದಾರೆ.

ರಕ್ಷಿತ್‌ ಶೆಟ್ಟಿ ಅಭಿನಯದ ‘ಕಿರಿಕ್‌ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’ ಚಿತ್ರವೂ ವರ್ಷದ ಕೊನೆಯ ಶುಕ್ರವಾರ ಬಿಡುಗಡೆಯಾಗಿತ್ತು. ಈ ವರ್ಷದ ಕೊನೆಯ ಶುಕ್ರವಾರ(ಡಿ.31) ಹೇಮಂತ್‌ ಎಂ.ರಾವ್‌ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆಗೆ ರಕ್ಷಿತ್‌ ಶೆಟ್ಟಿ ಅವರು ಮೊದಲು ನಿರ್ಧರಿಸಿದ್ದರು. ಈ ಸಂದರ್ಭದಲ್ಲಿ ಸೆಪ್ಟೆಂಬರ್‌– ಅಕ್ಟೋಬರ್‌ನಲ್ಲೇ ‘777 ಚಾರ್ಲಿ’ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಆದರೆ ಲಾಕ್‌ಡೌನ್‌ ಹಾಗೂ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ನಿರ್ಬಂಧದ ಕಾರಣದಿಂದಾಗಿ ಬಿಗ್‌ಬಜೆಟ್‌ ಚಿತ್ರಗಳ ಬಿಡುಗಡೆ ವಿಳಂಬವಾಗಿದೆ. ಈ ಕಾರಣದಿಂದಾಗಿ ಡಿಸೆಂಬರ್‌ ಅಂತ್ಯಕ್ಕೆ ‘777 ಚಾರ್ಲಿ’ ಬಿಡುಗಡೆಗೆ ರಕ್ಷಿತ್‌ ನಿರ್ಧರಿಸಿದ್ದಾರೆ. ಹೀಗಾಗಿ ‘ಸಪ್ತ ಸಾಗರದಾಚೆ ಎಲ್ಲೋ’ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಪ್ರಶ್ನೆ ಪ್ರೇಕ್ಷಕರಲ್ಲಿ ಮೂಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು