ಸೋಮವಾರ, ಮಾರ್ಚ್ 1, 2021
19 °C

ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿಗೆ ಭಾಜನವಾದ ವರ್ಣಪಟಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ವರ್ಲ್ಡ್ ಪ್ರೀಮಿಯರ್ ಫಿಲ್ಮ್‌  ಪ್ರಶಸ್ತಿಗೆ ಭಾಜನವಾಗಿದೆ. ಹಿಂದೆ ಈ ಚಿತ್ರಕ್ಕೆ ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಕೂಡ ದಕ್ಕಿತ್ತು.

ನೈಜ ಘಟನೆಯಾಧಾರಿತ ಈ ಸಿನಿಮಾದಲ್ಲಿ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದಾರೆ. ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ.

ಮಕ್ಕಳನ್ನು ಕಾಡುವ ಆಟಿಸಂ ಸಮಸ್ಯೆಯ ಕುರಿತ ಕಥೆಯನ್ನು ಹೊಂದಿದೆ ವರ್ಣಪಟಲ. ತಾಯಿ ಮಗುವಿನ ಬಾಂಧವ್ಯವೂ ಈ ಚಿತ್ರದಲ್ಲಿದೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ದಕ್ಷಿಣಕನ್ನಡದ ಮಡಂತ್ಯಾರು, ಮಂಗಳೂರು, ಮಡಿಕೇರಿ, ಬೆಂಗಳೂರಿನಲ್ಲಿ ಸಿನಿಮಾದ ಶೂಟಿಂಗ್ ನಡೆದಿತ್ತು. ಚಿತ್ರದಲ್ಲಿ ಧನಿಕ ಹೆಗ್ಡೆ, ಚೇತನ್ ರೈ ಮಾಣಿ, ಇಳಾ ವಿಟ್ಲಾ, ಅರವಿಂದ್ ರಾವ್‌ ಹಾಗೂ ಶ್ರೀಕಾಂತ್ ಹೆಬ್ಳಿಕರ್ ಮೊದಲಾದವರು ನಟಿಸಿದ್ದಾರೆ.

ಈ ಚಿತ್ರದ ಚಿತ್ರಕಥೆ ಹಾಗೂ ನಿರ್ಮಾಣದ ಹೊತ್ತಿದ್ದಾರೆ ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹಾಗೂ ಪಲ್ಲವಿ. ಚಿತ್ರಕ್ಕೆ ಎ.ಪಿ. ಅರ್ಜುನ್ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು