ಶನಿವಾರ, ಜನವರಿ 16, 2021
24 °C

‘ಆ ದಿನಗಳು’ ಖ್ಯಾತಿಯ ಚೇತನ್ ತೆಲುಗಿಗೆ ಎಂಟ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಆ ದಿನಗಳು’ ಖ್ಯಾತಿಯ ನಟ ಚೇತನ್‌ ತೆಲುಗು ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರ ಚೊಚ್ಚಲ ತೆಲುಗು ಚಿತ್ರ ಇತ್ತೀಚೆಗೆ ಲೋಕಾರ್ಪಣೆಗೊಂಡಿತು. ಇನ್ನೂ ಹೆಸರಿಡದ ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದೆ. ಹೈದರಾಬಾದ್‌ನಲ್ಲಿ ಸಿನಿಮಾ ಮುಹೂರ್ತ ಕಾರ್ಯಕ್ರಮ ನಡೆದಿದ್ದು ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.

‘ಈ ಸಿನಿಮಾದಲ್ಲಿ ನನ್ನದು ಭಿನ್ನ ಪಾತ್ರ. ನಾನು ಕನ್ನಡದಲ್ಲಿ ಈವರೆಗೆ ಮಾಡಿರದ ಪಾತ್ರವಿದು. ಆ ಕಾರಣಕ್ಕೆ ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ಇದರಲ್ಲಿ ನನ್ನದು ಹಾಸ್ಯಮಿಶ್ರಿತ ಪೊಲೀಸ್ ಅಧಿಕಾರಿಯ ಪಾತ್ರ. ಈ ಸಿನಿಮಾದ ಮೂಲಕ ತೆಲುಗು ಸಿನಿಕ್ಷೇತ್ರಕ್ಕೆ ಕಾಲಿರಿಸುತ್ತಿರುವುದಕ್ಕೆ ಖುಷಿ ಇದೆ’ ಎಂದಿದ್ದಾರೆ ಚೇತನ್‌.

ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡ ಸದ್ಯದಲ್ಲೇ ತಿಳಿಸಲಿದೆ. ಕನ್ನಡದ ಚಿತ್ರಕಥೆ ರಚನೆಕಾರ ಚಕ್ರವರ್ತಿ ಈ ಸಿನಿಮಾದ ಮೂಲಕ ನಿರ್ದೇಶನದ ಹಾದಿ ಹಿಡಿದಿದ್ದಾರೆ. ಕನ್ನಡದಲ್ಲಿ ಚೇತನ್ ನಟನೆಯ ‘ರಣಂ’ ಬಿಡುಗಡೆಗೆ ಸಿದ್ಧವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು