ಗುರುವಾರ , ಮೇ 26, 2022
30 °C

‘100 ಕೋಟಿ’ಯ ಹಿಂದೆ ಚೇತನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆ ದಿನಗಳು ಖ್ಯಾತಿಯ ಚೇತನ್‌ ಅವರು ‘100 ಕ್ರೋರ್ಸ್‌’ ಚಿತ್ರದಲ್ಲಿ ಭ್ರಷ್ಟ ಪೊಲೀಸ್‌ ಅಧಿಕಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದಾರೆ. ಸಿನಿಮಾದ ಪೋಸ್ಟರ್‌ ಬಿಡುಗಡೆ ನಡೆದಿದೆ. ನಿರ್ದೇಶಕ ಸಿಂಪಲ್‌ ಸುನಿ ಪೋಸ್ಟರ್‌ ಬಿಡುಗಡೆ ಮಾಡಿದರು. ಟಾಲಿವುಡ್‌ ಸಂಗೀತ ನಿರ್ದೇಶಕ ಸಾಯಿ ಕಾರ್ತಿಕ್‌ ಅವರು ಈ ಚಿತ್ರದ ನಿರ್ಮಾಪಕರು. ಸಂಗೀತವೂ ಅವರದ್ದೇ. ನಾಗಂ ತಿರುಪತಿ ರೆಡ್ಡಿ, ಶ್ರೀಕಾಂತ್ ದೀಪಾಲ್ ಸಹ ನಿರ್ಮಾಪಕರು. ವಿರಾಟ್ ಚಕ್ರವರ್ತಿ ನಿರ್ದೇಶಕರು. ಎಸ್ಎಸ್ ಸ್ಟುಡಿಯೋಸ್ ಮತ್ತು ವಿಷನ್ ಸಿನಿಮಾಸ್ ಬ್ಯಾನರ್ ಅಡಿ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ.  

ಸಾಯಿ ಕಾರ್ತಿಕ್‌ ಅವರು ತೆಲುಗಿನಲ್ಲಿ 75ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಇತ್ತೀಚೆಗೆ ಗಣೇಶ್‌ ಅಭಿನಯದ ‘ತ್ರಿಬಲ್‌ ರೈಡಿಂಗ್‌’ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಗಣೇಶ್ ನಟಿಸುತ್ತಿರುವ ತ್ರಿಬಲ್ ರೈಡಿಂಗ್ ಚಿತ್ರಕ್ಕೂ ಸಂಗೀತ ನೀಡುತ್ತಿದ್ದಾರೆ ಹಾಗೂ ಈ ಹಿಂದೆ ಕನ್ನಡದ ಕೆಲವು ಚಿತ್ರಗಳಿಗೂ ಸಂಗೀತ ನೀಡಿದ್ದಾರೆ.

ನಟ ಚೇತನ್‌ ಪ್ರತಿಕ್ರಿಯಿಸಿ, ‘ದುಡ್ಡಿಗೋಸ್ಕರ ಏನು ಬೇಕಾದರೂ ಮಾಡುವ ಪಾತ್ರ ನನ್ನದು. ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಸಿದ್ಧವಾಗಿದೆ. ಏಕಕಾಲದಲ್ಲಿ ಎರಡೂ ಅವತರಣಿಕೆಯ ಶೂಟಿಂಗ್ ಮಾಡಿದ್ದೇವೆ. ಕನ್ನಡದ ಜತೆಗೆ ತೆಲುಗು ಕಲಾವಿದರೂ ಈ ಸಿನಿಮಾದಲ್ಲಿದ್ದಾರೆ. ಒಂದೊಳ್ಳೆ ಹೊಸ ಅನುಭವ. ಅಷ್ಟೇ ಸಾಹಸ ದೃಶ್ಯಗಳೂ ಸಿನಿಮಾದ ಹೈಲೈಟ್’ ಎಂದರು.
‘ಒಂದು ಐಟಂ ಹಾಡು ಮತ್ತೊಂದು ಥೀಮ್ ಹಾಡು ಚಿತ್ರದಲ್ಲಿ ಇರಲಿದೆ’ ಎಂದು ಸಾಯಿ ಕಾರ್ತಿಕ್‌ ಮಾಹಿತಿ ನೀಡಿದರು.

ಕರ್ನಾಟಕದ ವಿವಿಧ ಸ್ಥಳಗಳು ಮತ್ತು ಹೈದರಾಬಾದ್‌ನಲ್ಲಿ ಶೂಟಿಂಗ್ ಮಾಡಲಾಗಿದೆ. ಚೇತನ್ ಮತ್ತು ಹ್ಯಾಪಿಡೇಸ್ ಸಿನಿಮಾ ಖ್ಯಾತಿಯ ಟೈಸನ್ ರಾಹುಲ್ ಮುಖ್ಯಭೂಮಿಕೆಯಲ್ಲಿದ್ದಾರೆ. ಸಾಕ್ಷಿ ಚೌಧರಿ, ಎಮಿ ಎಲಿ ಮತ್ತು ಐಶ್ವರ್ಯಾ ರಾಜ್ ನಾಯಕಿಯರಾಗಿದ್ದಾರೆ. ಇನ್ನುಳಿದಂತೆ ಇಂತುರಿ ವಾಸು, ಶರತ್ ಲೋಹಿತಾಶ್ವ, ಶೇಕಿಂಗ್ ಶೇಷು, ಭದ್ರಂ, ಅನ್ನಪೂರ್ಣಮ್ಮ, ಸಮೀರ್ ಸೇರಿ ಹಲವರು ತಾರಾಗಣದಲ್ಲಿದ್ದಾರೆ ಎಂದರು ಕಾರ್ತಿಕ್‌. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು