ಶುಕ್ರವಾರ, ಮೇ 29, 2020
27 °C
ಜನವರಿ 10ರಂದು ಬಿಡುಗಡೆ

ದೀಪಿಕಾ ಪಡುಕೋಣೆ ಅಭಿನಯದ ‘ಛಪಾಕ್’ ಚಿತ್ರದ ಫಸ್ಟ್‌ಲುಕ್ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುಳಿಕೆನ್ನೆಯ ಬೆಡಗಿ ದೀಪಿಕಾ ಪಡುಕೋಣೆ ಅಭಿನಯಿಸುತ್ತಿರುವ ‘ಛಪಾಕ್’ ಚಿತ್ರದ ಫಸ್ಟ್‌ ಲುಕ್ ಬಿಡುಗಡೆಯಾಗಿದೆ. 

ಈ ಸಿನಿಮಾ ಆ್ಯಸಿಡ್ ಸಂತ್ರಸ್ತೆ ಲಕ್ಷ್ಮೀ ಅಗರ್ವಾಲ್ ಅವರ ಬದುಕಿನ ಕಥೆಯಾಧಾರಿತವಾಗಿದೆ. ದೀಪಿಕಾ ಫಸ್ಟ್‌ಲುಕ್‌ನಲ್ಲಿ, ಲಕ್ಷ್ಮೀ ಅಗರ್ವಾಲ್ ಅವರಂತೆಯೇ ಗೋಚರಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಸಂತಸ ಹಂಚಿಕೊಂಡಿರುವ ದೀಪಿಕಾ, ಈ ಪಾತ್ರ ಯಾವಾಗಲೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ...#ಮಾಲ್ಟಿ. ಇಂದಿನಿಂದ ಚಿತ್ರೀಕರಣ ಶುರುವಾಗುತ್ತಿದೆ #ಛಪಾಕ್. ಜನವರಿ 10, 2020ರಂದು ಈ ಚಿತ್ರ ತೆರೆಕಾಣಲಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಟ್ವಿಟರ್‌ನಲ್ಲಿ ಈಗಾಗಲೇ 20 ಸಾವಿರ ಮಂದಿ ವೀಕ್ಷಿಸಿದ್ದು, 3.3 ಸಾವಿರ ಜನರು ರೀಟ್ವೀಟ್ ಮಾಡಿದ್ದಾರೆ. 

ಈ ಚಿತ್ರವನ್ನು ಮೇಘನಾ ಗುಲ್ಜರ್ ನಿರ್ದೇಶಿಸುತ್ತಿದ್ದಾರೆ. 

ಇದನ್ನೂ ಓದಿ..
ಸುದೀರ್ಘ ಕಥನ: ದೀಪಿಕಾ ಪಡುಕೋಣೆಯ ಮನತಟ್ಟಿದ ಆಸಿಡ್ ಸಂತ್ರಸ್ತೆಯ ಬದುಕು ಹೀಗಿದೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು