ಭಾನುವಾರ, ಮೇ 29, 2022
31 °C

ಚಿರಂಜೀವಿ ನಟನೆಯ ‘ಆಚಾರ್ಯ’ ಏ.1ರಂದು ಬಿಡುಗಡೆ: ಮಹೇಶ್‌ ಬಾಬುಗೆ ಪೈಪೋಟಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ಮೆಗಾಸ್ಟಾರ್ ಚಿರಂಜೀವಿ, ರಾಮ್‌ ಚರಣ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಆಚಾರ್ಯ’ ಏ.1 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೊನಿಡೇಲಾ ಪ್ರೋಡಕ್ಷನ್ ಕಂಪನಿ, ‘ಈ ಯುಗಾದಿ ಹಬ್ಬಕ್ಕೆ ‘ಆಚಾರ್ಯ’ ಬಿಡುಗಡೆಯಾಗಲಿದೆ’ ಎಂದು ತಿಳಿಸಿದೆ.

ಓದಿ... ‘ಆಚಾರ್ಯ’ ಸಿನಿಮಾ: ಚಿರಂಜೀವಿ–ಕೊರಟಾಲ ಶಿವ ಮೇಲೆ ಕಥೆ ಕದ್ದ ಆರೋಪ?

ಕೊರಟಾಲ ಶಿವ ನಿರ್ದೇಶನದ ಆಚಾರ್ಯ ಚಿತ್ರ ಫೆಬ್ರುವರಿ 4ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಕೋವಿಡ್‌ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.

ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರ ಏ.1ರಂದೇ ಬಿಡುಗಡೆಯಾಗಲಿದ್ದು, ಎರಡು ಸಿನಿಮಾಗಳ ನಡುವೆ ಪೈಪೋಟಿ ನಡೆಯಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಬಳಿಕ ದಿನಾಂಕವನ್ನು ಏ.1ಕ್ಕೆ ಮುಂದೂಡಿಕೆ ಮಾಡಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ದೊಡ್ಡ ಬಜೆಟ್‌ ಚಿತ್ರಗಳಾದ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಪ್ಯಾನ್‌ ಇಂಡಿಯಾ ಸಿನಿಮಾ ಆರ್‌ಆರ್‌ಆರ್‌(ರೌದ್ರ–ರಣ–ರುಧಿರ), ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರಗಳನ್ನು ಮುಂದೂಡಲಾಗಿದೆ.

ಓದಿ... ನಟ ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಮತ್ತೆ ಮುಂದೂಡಿಕೆ?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು