ಸೋಮವಾರ, ಅಕ್ಟೋಬರ್ 18, 2021
25 °C

ಬೈಕ್‌ ಅಪಘಾತ: ತೆಲುಗು ನಟ ಸಾಯಿ ಧರಂ ತೇಜ್ ಆರೋಗ್ಯದಲ್ಲಿ ಚೇತರಿಕೆ -ಚಿರಂಜೀವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಬೈಕ್‌ ಅಪಘಾತದಲ್ಲಿ ಗಾಯಗೊಂಡಿರುವ ತೆಲುಗು ನಟ ಸಾಯಿ ಧರಂ ತೇಜ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

ಸಾಯಿ ತೇಜ್ ಅಭಿನಯದ ’ರಿಪಬ್ಲಿಕ್’ ಸಿನಿಮಾದ ಟ್ರೈಲರ್‌ ಬಿಡುಗಡೆ ಮಾಡಿ, ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಾಯಿ ತೇಜ್ ಚೇತರಿಸಿಕೊಳ್ಳುತ್ತಿದ್ದಾರೆ, ಸಾಯಿ ಬಯಸಿದಂತೆ ರಿಪಬ್ಲಿಕ್‌ ಸಿನಿಮಾ ಅಕ್ಟೋಬರ್‌ 1ರಂದು ಬಿಡುಗಡೆಯಾಗಲಿದೆ. ಅಭಿಮಾನಿಗಳ ವಾತ್ಸಲ್ಯ, ಪ್ರೀತಿ,  ಶ್ರೀರಾಮನ ಕೃಪೆಯಿಂದ ಸಾಯಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚಿರಂಜೀವಿ ಹೇಳಿದ್ದಾರೆ.  

ದೇವರ ಕಟ್ಟ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ನಾಯಕಿಯಾಗಿ ಐಶ್ವರ್ಯಾ ರಾಜೇಶ್‌, ಮುಖ್ಯ ಪಾತ್ರಗಳಲ್ಲಿ ರಮ್ಯಾ ಕೃಷ್ಣ, ಜಗಪತಿ ಬಾಬು ನಟಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು