ಮಂಗಳವಾರ, ಮೇ 24, 2022
26 °C

ತೆಲುಗಿನ ಮೆಗಾಸ್ಟಾರ್‌ ಚಿರಂಜೀವಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲುಗು ನಟ ಮೆಗಾಸ್ಟಾರ್‌ ಚಿರಂಜೀವಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದಾರೆ.

ಈ ಬಗ್ಗೆ ಚಿರಂಜೀವಿ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮನೆಯಲ್ಲಿಯೇ ನಾನು ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಹಾಗೇ  ಸದ್ಯ ನಿಮ್ಮನ್ನು ನೋಡಲು ಆಗುತ್ತಿಲ್ಲ, ಶೀಘ್ರವೇ ಗುಣಮುಖನಾಗಿ ಬರುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಚಿರಂಜೀವಿಗೆ 2020ರ ನವೆಂಬರ್‌ ತಿಂಗಳಲ್ಲಿ ಕೂಡ ಕೋವಿಡ್‌ ಸೋಂಕು ದೃಢಪಟ್ಟಿತ್ತು. ನಂತರದ ದಿನಗಳಲ್ಲಿ ಅವರು ಚೇತರಿಸಿಕೊಂಡು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಬಹುನಿರೀಕ್ಷೆಯ ಸಿನಿಮಾ ’ಆಚಾರ್ಯ’ ಬಿಡುಗಡೆ ಸಿದ್ಧವಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು