ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರ ಆದರ್ಶ, ವ್ಯಕ್ತಿತ್ವದ ಕುರಿತಾದ ಕಥೆಯನ್ನು ಹೊಂದಿರುವ ‘ಪುನೀತ್ ನಿವಾಸ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಾಗೇಂದ್ರ ಪ್ರಸಾದ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ಪುನೀತ್ ನಿವಾಸದ ಒಳಗೆ ಬಂದಾಗ ಪುನೀತ್ ಅವರೇ ಕಾಣಿಸುತ್ತಾರೆ. ಸಿನಿಮಾ ಮಾಡಬೇಕೆಂದು ಹಣ ಕೂಡಿಟ್ಟುಕೊಂಡಿದ್ದ ಒಬ್ಬ ಬಡ ಹುಡುಗ ಕೊನೆಗೆ ಪುನೀತ್ ಆದರ್ಶಗಳಿಂದ ಹೇಗೆ ಪ್ರಭಾವಿತನಾಗುತ್ತಾನೆ ಎಂಬುದೇ ಚಿತ್ರದ ಕಥೆ’ ಎಂದರು ನಿರ್ಮಾಪಕ ಎಸ್.ಮೋಹನ್.

ನಟ ಅಭಿಜಿತ್ ಮುಖ್ಯ ಪಾತ್ರದಲ್ಲಿದ್ದಾರೆ. ‘ಈ ಶೀರ್ಷಿಕೆಗೆ ದೊಡ್ಡ ಪವರ್ ಇದೆ. ಟೈಟಲ್ ಹೇಳಿದಾಗಲೇ ಚಿತ್ರ ಒಪ್ಪಿಕೊಂಡೆ. ನಾನು ಪುನೀತ್ ಅವರ ಜೊತೆ ನಟಿಸಬೇಕು ಎಂದುಕೊಂಡಿದ್ದೆ. ಅದು ಸಾಧ್ಯವಾಗಲಿಲ್ಲ. ಈಗ ಅವರ ಹೆಸರಿನ ಚಿತ್ರದಲ್ಲಿ ಅಭಿನಯಿಸಿದ್ದೇನೆ’ ಎಂದರು ಅಭಿಜಿತ್.

ಎಂ.ಎಸ್.ಉಮೇಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ ಮುಂತಾದವರು ಚಿತ್ರದಲ್ಲಿದ್ದಾರೆ. ಎಸ್.ಬಾಲು ಛಾಯಾಚಿತ್ರಗ್ರಹಣ, ಮುತ್ತುರಾಜ್ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.