ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಅ.15ರಿಂದ ಆರಂಭ: ಅರ್ಧದಷ್ಟು ಪ್ರೇಕ್ಷಕರಿಗೆ ಪ್ರವೇಶ

Last Updated 6 ಅಕ್ಟೋಬರ್ 2020, 6:06 IST
ಅಕ್ಷರ ಗಾತ್ರ

ದೆಹಲಿ: ಕೇಂದ್ರ ಸರ್ಕಾರದ ಆದೇಶದಂತೆ ಅ. 15ರಿಂದ ಸಿನಿಮಾ, ಥಿಯೇಟರ್‌, ಮಲ್ಟಿಪ್ಲೆಕ್ಸ್‌ಗಳು ಪುನಾರರಾಂಭವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಮಂಗಳವಾರ ಹೇಳಿದ್ದಾರೆ.

ಸಿನಿಮಾ ಮಂದಿರಗಳ ಒಟ್ಟು ಆಸನ ವ್ಯವಸ್ಥೆಯ ಶೇ. 50ರಷ್ಟು ಜನರಿಗೆ ಮಾತ್ರ ಪ್ರವೇಶವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಇಲಾಖೆ ಸೂಚಿಸಿರುವ ಕೋವಿಡ್‌ ಶಿಷ್ಟಾಚಾರಗಳನ್ನು ಚಿತ್ರ ಮಂದಿರಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾರ್ಚ್‌ 25ರಂದು ಮೊದಲ ಬಾರಿಗೆ ಲಾಕ್‌ಡೌನ್‌ ಅನ್ನು ದೇಶದಲ್ಲಿ ಜಾರಿ ಮಾಡಿತು. ಅಂದಿನಿಂದ ಈ ವರೆಗೆ ದೇಶದಲ್ಲಿ ಚಿತ್ರಮಂದಿಗಳು ತೆರೆದಿಲ್ಲ. ಹೀಗಾಗಿ ಸಿನಿಮಾ ಕ್ಷೇತ್ರದ ಕಲಾವಿದರು, ತಂತ್ರಜ್ಞರು, ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದು, ನೆರವಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳವಣಿಗೆಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT