ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತ್ತೆ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಸಾಯಿಕೃಷ್ಣ

Published 22 ಜೂನ್ 2024, 5:05 IST
Last Updated 22 ಜೂನ್ 2024, 5:05 IST
ಅಕ್ಷರ ಗಾತ್ರ

ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಭಾಷಣೆಕಾರ ಮಳವಳ್ಳಿ ಸಾಯಿಕೃಷ್ಣ ಬಹಳ‌ ದಿನಗಳ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿರುವ ‘ರಾಖಾ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ನೆರವೇರಿತು.

ಸಚಿವ ಶಿವರಾಜ್ ಎಸ್.ತಂಗಡಗಿ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಡಾ.ನಾಗೂರ್‌ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

‘ಈ ಸಿನಿಮಾಕ್ಕೆ ಡೈಲಾಗ್ ಬರೆಸಲೆಂದು ನನ್ನ ಬಳಿ ಬಂದ ನಿರ್ಮಾಪಕರು ನಂತರ ನೀವೇ ಡೈರೆಕ್ಷನ್ ಮಾಡಿ ಎಂದರು. ತಂದೆ ಮಕ್ಕಳ ನಡುವೆ ನಡೆಯುವ ಕಥೆಯಿದು. ಅಪ್ಪ ಮಕ್ಕಳನ್ನು ಹೇಗೆಲ್ಲಾ ಪೋಷಣೆ ಮಾಡುತ್ತಾನೆ, ಆದರೆ, ಅದೇ ಮಕ್ಕಳು ತಮ್ಮ ಪೋಷಕರನ್ನು ಹೇಗೆ ನೋಡಿಕೊಳ್ಳುತ್ತಾರೆ ಎಂಬುದು ಚಿತ್ರದ ಕಥೆ. ಚಿತ್ರದಲ್ಲಿ ನಾಲ್ಕು ಹಾಡು, ನಾಲ್ಕು ಸಾಹಸ ದೃಶ್ಯಗಳಿವೆ. ವಿಜಯಪುರದಲ್ಲಿ 20 ದಿನ ಚಿತ್ರೀಕರಿಸಿ, ನಂತರ ಬೆಂಗಳೂರಲ್ಲಿ ಮುಂದುವರೆಸುತ್ತೇವೆ’ ಎಂದರು ನಿರ್ದೇಶಕ ಸಾಯಿಕೃಷ್ಣ. 

ಅಮೃತಾ ನಾಯಕಿ. ಹಿರಿಯ ನಟ ಮಂಜುನಾಥ ಹೆಗಡೆ, ಹರಿಣಿ ಮುಖ್ಯ ಪಾತ್ರದಲ್ಲಿದ್ದಾರೆ. ಎಂ.ಎಸ್.ತ್ಯಾಗರಾಜ್ ಸಂಗೀತ, ಆರ್.ಡಿ. ನಾಗಾರ್ಜುನ ಛಾಯಾ ಚಿತ್ರಗಹಣವಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT