ಬೆಂಗಳೂರು:ನಟ ಕೃಷ್ಣ ಅಜೇಯ್ ರಾವ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ವಿವಾದ ಸೃಷ್ಟಿಸಿದೆ.

ಇತ್ತೀಚೆಗೆ ಅಜೇಯ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆ ವೇಳೆ ಅವರ ಹೊಸ ಸಿನಿಮಾ ಘೋಷಣೆಯಾಗಿತ್ತು. ಜೊತೆಗೆ, ಅದರ ಪೋಸ್ಟರ್ ಕೂಡ ಬಿಡುಗಡೆಯಾಗಿತ್ತು. ಇದರಲ್ಲಿ ಅವರು ಪೊಲೀಸ್ ಅಧಿಕಾರಿಯಾಗಿ ಅರೆಬಟ್ಟೆಯಲ್ಲಿ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಜೇಯ್ ಈ ಪೋಸ್ಟರ ಅನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

‘ಸಿನಿಮಾದ ಪ್ರಚಾರಕ್ಕಾಗಿ ಶ್ರೀಕೃಷ್ಣನಿಗೆ ಅವಹೇಳನ ಮಾಡಲಾಗಿದೆ. ನಟನ ಈ ವರ್ತನೆ ಸರಿಯಲ್ಲ. ಹಿಂದೂಗಳ ಭಾವನೆಗೆ ಅವಮಾನ ಮಾಡುವ ಈ ಚಿತ್ರಕ್ಕೆ ಅವಕಾಶ ನೀಡಬಾರದು’ ಎಂದು ಜನರು ಆಗ್ರಹಿಸಿದ್ದಾರೆ.

ಅಜೇಯ್ ರಾವ್ ನಟನೆಯ 27ನೇಸಿನಿಮಾಇದು. ಗುರು ದೇಶಪಾಂಡೆ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.