ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಚನಾ ನಟನೆಯ ‘4N6’ ಟೀಸರ್‌ ಬಿಡುಗಡೆ

Published 27 ಫೆಬ್ರುವರಿ 2024, 23:30 IST
Last Updated 27 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

‘ಲವ್‌ ಮಾಕ್ಟೇಲ್‌’ ಹಾಗೂ ‘ಲವ್‌ 360’ ಸಿನಿಮಾ ಖ್ಯಾತಿಯ ನಟಿ ರಚನಾ ಇಂದರ್‌ ನಟನೆಯ ಹೊಸ ಸಿನಿಮಾ ‘4N6’ ಫಸ್ಟ್‌ ಗ್ಲಿಮ್ಸ್‌ ಟೀಸರ್‌ ಬಿಡುಗಡೆಯಾಗಿದೆ. 

ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ನಿರ್ಮಿಸಿರುವ ಈ ಚಿತ್ರವು ಕೊಲೆಯ ಸುತ್ತ ನಡೆಯುವ ತನಿಖೆ ಹಾಗೂ ಥ್ರಿಲ್ಲರ್‌ ಕಥಾಹಂದರ ಹೊಂದಿದೆ. ಚಿತ್ರವು ಬಿಡುಗಡೆಗೆ ಸಜ್ಜಾಗುತ್ತಿದ್ದು, ಭವಾನಿ ಪ್ರಕಾಶ್, ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ದರ್ಶನ್ ಶ್ರೀನಿವಾಸ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಇವರು ನಿರ್ದೇಶಿಸಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ರಚನಾ ಇಂದರ್ ಫಾರೆನ್ಸಿಕ್ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

‘ಕೊಲೆ ಪ್ರಕರಣದಲ್ಲಿ ಫೋರೆನ್ಸಿಕ್ ರಿಪೋರ್ಟ್ ಪ್ರಮುಖವಾಗಿರುತ್ತದೆ. ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಕಥೆ ಹೆಣೆಯುವ ಸಂದರ್ಭದಲ್ಲಿ ಸಾಕಷ್ಟು ತಜ್ಞರ ಸಲಹೆ ತೆಗೆದುಕೊಂಡಿದ್ದೇನೆ. ಬೆಂಗಳೂರು ಸುತ್ತಮುತ್ತ  ಚಿತ್ರೀಕರಣ ನಡೆಸಲಾಗಿದ್ದು, ಸೆನ್ಸಾರ್‌ನಿಂದ ಯು/ಎ ಪ್ರಮಾಣಪತ್ರ ದೊರಕಿದೆ’ ಎಂದರು ದರ್ಶನ್‌. 

ಏಪ್ರಿಲ್‌ನಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿದೆ. ಚರಣ್ ತೇಜ್ ಛಾಯಾಚಿತ್ರಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT