ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘...ಭಾಗ್ಯಲಕ್ಷ್ಮಿ’ಗೆ ಜೊತೆಯಾದ ಸಿಂಪಲ್‌ ಸುನಿ

Published 19 ಮೇ 2024, 22:30 IST
Last Updated 19 ಮೇ 2024, 22:30 IST
ಅಕ್ಷರ ಗಾತ್ರ

ದೀಕ್ಷಿತ್ ಶೆಟ್ಟಿ, ಬೃಂದಾ ಆಚಾರ್ಯ ಜೋಡಿಯಾಗಿ ನಟಿಸುತ್ತಿರುವ ‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. ನಿರ್ದೇಶಕ ಸಿಂಪಲ್‌ ಸುನಿ ಚಿತ್ರದ ಪೋಸ್ಟರ್‌ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ಅವನೇ ಶ್ರೀಮನ್ನಾರಾಯಣ’ ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ವಿಎಫ್‌ಎಕ್ಸ್‌ ನೀಡಿರುವ ಅಭಿಷೇಕ ಎಂ. ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಈ ಹಿಂದೆ ‘ರಂಗಿ ತರಂಗ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿದ್ದ ಹೆಚ್.ಕೆ ಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 

‘ಶೇ.80ರಷ್ಟು ಚಿತ್ರೀಕರಣ ಮುಗಿದಿದೆ‌‌. ಮುಂದಿನ ತಿಂಗಳು ಚಿತ್ರೀಕರಣ ಮುಗಿಸಿ, ಈ ವರ್ಷವೇ ತೆರೆಗೆ ಬರುವ ಆಲೋಚನೆಯಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದ ಸುತ್ತ ಚಿತ್ರೀಕರಣ ಮಾಡಲಾಗಿದೆ. ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವಿದೆ’ ಎನ್ನುತ್ತಾರೆ ನಿರ್ದೇಶಕ ಅಭಿಷೇಕ. 

ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಅಶ್ವಿನ್ ರಾವ್ ಪಲ್ಲಕ್ಕಿ ಮುಂತಾದವರ ತಾರಾಗಣ ಚಿತ್ರದಲ್ಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಂಡ ಹೇಳಿದೆ.
ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT