ಬುಧವಾರ, ಮಾರ್ಚ್ 29, 2023
27 °C

ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಮನೆಗೆ ಭೇಟಿ ನೀಡಿ ಸಿ.ಎಂ ಬೊಮ್ಮಾಯಿ ಸಾಂತ್ವನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ‘ಅಪ್ಪು’ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಪ್ರೀತಿಯ ಪುನೀತ್ ರಾಜ್‍ಕುಮಾರ್ ಕುಟುಂಬಕ್ಕೆ ಸಾಂತ್ವನ ಹೇಳುವುದಕ್ಕೆ ಬಂದಿದ್ದೆ. ಪುನೀತ್ ಕನ್ನಡದ ಆಸ್ತಿ. ಇನ್ನು ಮುಂದೆ ಸಾಕಷ್ಟು ಕಾರ್ಯಕ್ರಮಗಳು ನಡೆಯಬೇಕಿದೆ. ಇದರ ಬಗ್ಗೆ ಅವರ ಮನೆಯವರೊಂದಿಗೆ ಮಾತನಾಡಿದ್ದೇವೆ’ ಎಂದರು.

‘ಪುನೀತ್ ರಾಜ್‌ಕುಮಾರ್‌ ಕುಟುಂಬದವರ ಜೊತೆಗೆ ನಾವು ಇದ್ದೇವೆ. ಚಲನಚಿತ್ರ ಮಂಡಳಿಯಿಂದ ಒಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದಕ್ಕೆ ಸರ್ಕಾರದ ವತಿಯಿಂದ ಸಹಾಯ ಮಾಡುತ್ತೇವೆ’ ಎಂದು ಸಿಎಂ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ, ಡಾ.ಸಿ.ಎನ್.ಅಶ್ವತ್ಥನಾರಾಯಣ, ರಾಘವೇಂದ್ರ ರಾಜಕುಮಾರ್, ಚಿನ್ನೇಗೌಡ, ಎಸ್.ಎ ಗೋವಿಂದರಾಜ್, ಯುವರಾಜ್ ಕುಮಾರ್ ಮತ್ತು ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು