ಸೋಮವಾರ, ಅಕ್ಟೋಬರ್ 3, 2022
24 °C

ಹೃದಯಾಘಾತ: ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಹೃದಯಾಘಾತದಿಂದ ಬುಧವಾರ ಏಮ್ಸ್‌ಗೆ ದಾಖಲಾಗಿರುವ ಹಾಸ್ಯನಟ ರಾಜು ಶ್ರೀವಾಸ್ತವ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿರಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಪ್ರಸ್ತುತ ಅವರು, ಕೊರೊನರಿ ಕೇರ್ ಯುನಿಟ್‌ನಲ್ಲಿ (ಸಿಸಿಯು) ಇದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

58 ವರ್ಷದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅವರನ್ನು ಬುಧವಾರ ಬೆಳಿಗ್ಗೆ 10:45 ರ ಸುಮಾರಿಗೆ ತುರ್ತು ಚಿಕಿತ್ಸೆಗಾಗಿ ಏಮ್ಸ್‌ಸಗೆ ದಾಖಲಿಸಲಾಗಿದೆ.

‘ರಾಜು ಅವರಿಗೆ ಆಂಜಿಯೋಪ್ಲ್ಯಾಸ್ಟ್ ಮಾಡಲಾಗಿದ್ದು, ಪರಿಧಮನಿಯ ಚಿಕಿತ್ಸಾ ಘಟಕಕ್ಕೆ (ಸಿಸಿಯು) ದಾಖಲಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.

1980 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಮೊದಲ ಆವೃತ್ತಿ ಮೂಲಕ ಗುರುತಿಸಿಕೊಂಡಿದ್ದ ಅವರು, ಅಂದಿನಿಂದ ಮನರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು