ಬುಧವಾರ, ಜನವರಿ 20, 2021
26 °C

ಕೋಮು ದ್ವೇಷ ಹರಡಿದ ಆರೋಪ: ಮುಂಬೈ ಪೊಲೀಸರಿಂದ ನಟಿ ಕಂಗನಾ ವಿಚಾರಣೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಮುಂಬೈ: ಕೋಮು ದ್ವೇಷ ಹರಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂದೇಲ್‌ ವಿಚಾರಣೆಯು ಮುಂಬೈನ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ನಡೆಯುತ್ತಿದೆ.

ವಿಚಾರಣೆ ವೇಳೆ ಕಂಗಾನಾ ಪರ ವಕೀಲ ರಿಜ್ವಾನ್ ಸಿದ್ದಿಕಿ ಸಹ ಅವರ ಜೊತೆಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

'ಎರಡು ಸಮುದಾಯಗಳ ನಡುವೆ ಕೋಮುದ್ವೇಷವನ್ನು ಪ್ರಚೋದಿಸುವ ಕೆಲಸದಲ್ಲಿ ಕಂಗನಾ ಮತ್ತು ಅವರ ಸಹೋದರಿ ರಂಗೋಲಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಪೋಸ್ಟ್‌ಗಳನ್ನು ಹಾಕುವ ಮೂಲಕ ಬಾಲಿವುಡ್‌ ಬಗ್ಗೆ ಜನರ ಮನಸ್ಸಿನಲ್ಲಿ ಕೆಟ್ಟ ಭಾವನೆ ಮೂಡಿಸಿದ್ದಾರೆ' ಎಂದು ಮುನ್ನಾವರ್‌ ಅಲಿ ಎಂಬುವವರು ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು