ಶನಿವಾರ, ಏಪ್ರಿಲ್ 1, 2023
32 °C

ನಟಿ ರಚಿತಾ ರಾಮ್‌ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀನಗರ: ನಟ ದರ್ಶನ್‌ ನಟನೆಯ ಕ್ರಾಂತಿ ಸಿನಿಮಾದ ಪ್ರಚಾರದ ಭರದಲ್ಲಿ ಚಿತ್ರ ನಟಿ ರಚಿತಾ ರಾಮ್‌ ಗಣರಾಜ್ಯೋತ್ಸವದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ವೈಜ್ಞಾನಿಕ ಪರಿಷತ್‌ ಸದಸ್ಯರು ಭಾನುವಾರ ಭಾರತೀನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಜ.26ರಂದು ನೀವು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದಿರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಆಚರಿಸಿ’ ಎಂದು ಹೇಳುವ ಮೂಲಕ ದೇಶಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ದೇಶದಲ್ಲಿನ ಸುಭದ್ರತೆಗೆ ಕಲ್ಪಿಸುತ್ತಿರುವ ಸಂವಿಧಾನಕ್ಕೆ ಗೌರವ ನೀಡುವುದು ಎಲ್ಲರ ಕರ್ತವ್ಯ ಆದರೆ ರಚಿತಾ ರಾಮ್‌ ಅವರು ಸಂವಿಧಾನಕ್ಕೂ ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೇಶದ ಬಗ್ಗೆ, ಸಂವಿಧಾನದ ಬಗ್ಗೆ, ಜ.26ರ ಮಹತ್ವದ ಬಗ್ಗೆ ಗೌರವ ಇಟ್ಟಕೊಳ್ಳದ ರಚಿತಾ ರಾಮ್‌ ವಿರುದ್ದ ಕ್ರಮ ಜರುಗಿಸಬೇಕು ಎಂದು ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಲಿಂಗಯ್ಯ, ಗೌರವಾಧ್ಯಕ್ಷ ಎಂ.ಸಿ.ಬಸವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಸಿ.ಮಹೇಂದ್ರ, ಉಪಾಧ್ಯಕ್ಷ ಶಿವರಾಜು ದೂರಿನಲ್ಲಿ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು