ಮಂಗಳವಾರ, ನವೆಂಬರ್ 24, 2020
25 °C

ಚಿತ್ರೀಕರಣ ಪೂರ್ಣಗೊಳಿಸಿದ ‘ಕಸ್ತೂರಿ ಮಹಲ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಿನೇಶ್ ಬಾಬು ಅವರ ನಿರ್ದೇಶನದ ‘ಕಸ್ತೂರಿ ಮಹಲ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರೀಕರಣ ನಂತರ ಚಟುವಟಿಕೆಗಳು ಸದ್ಯದಲ್ಲೇ ಆರಂಭವಾಗಲಿವೆ.

ಬಾಬು ಚಿತ್ರವೆಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಕುತೂಹಲವಿರುವುದು ಸಹಜವೇ. ಚಿತ್ರ ಯಾವಾಗ ಬಿಡುಗಡೆಯಾಗುವುದೊ ಎಂಬ ಕಾತರ ಕೂಡ. ಸಿನಿರಸಿಕರ ಕಾತರ ಹೆಚ್ಚಿಸುವಂತೆ ‘ಕಸ್ತೂರಿ ಮಹಲ್’ ಆಯುಧ ಪೂಜೆಯಂದು ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆಸಿಕೊಂಡಿದೆ.

ಈ ತಿಂಗಳ ಆರಂಭದಲ್ಲಿ ಚಿತ್ರದ ಚಿತ್ರೀಕರಣ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಆರಂಭವಾಗಿತ್ತು. ಸುಮಾರು 20 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಿ, ಪೂರ್ಣಗೊಳಿಸಿದೆ.

ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾ ಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ. ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ. ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ ಆರ್.ಸಿ. ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಎಚ್. ದಾಸ್ ಅವರ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು