ಶನಿವಾರ, ಅಕ್ಟೋಬರ್ 16, 2021
22 °C

ಸಲ್ಮಾನ್ ಖಾನ್ ಸಿನಿಮಾಗೆ ಕನ್ನಡಿಗ ರವಿ ಬಸ್ರೂರ್ ಸಂಗೀತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಸಲ್ಮಾನ್‌ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿ, ನಿರ್ಮಾಣ ಮಾಡುತ್ತಿರುವ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಈ ಬಗ್ಗೆ ಅವರೇ ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ’ಬಾಲಿವುಡ್‌ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿರುವುದು ನನಗೆ ಸಂತಸ  ತಂದಿದೆ. ಅವರ ಸಿನಿಮಾದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದೇನೆ. ನನ್ನ ಈ ಪಯಣಕ್ಕೆ ನಿಮ್ಮ ಬೆಂಬಲ ಇರಲಿ' ಎಂದು ಟ್ವೀಟ್‌ ಮಾಡಿದ್ದಾರೆ.

ಸಲ್ಮಾನ್‌ ಖಾನ್‌ ’ಅಂತಿಮ್‌’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಪಾತ್ರದಲ್ಲಿ ಸಹ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಮಹೇಶ್‌ ಮಂಜ್ರೆಕರ್‌ ನಿರ್ದೇಶನ ಮಾಡುತ್ತಿದ್ದು, ಆಯುಷ್‌ ಶರ್ಮಾ ನಾಯಕರಾಗಿದ್ದಾರೆ. 

ರವಿ ಬಸ್ರೂರ್‌ ಕೆಜಿಎಫ್‌ ಸಿನಿಮಾದ ಬಳಿಕ ತಮಿಳು ಹಾಗೂ ಮಲಯಾಳಂ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಈಗಾಗಲೇ ಹಿಂದಿಯ ಮೂರು ಸಿನಿಮಾಗಳಿಗೆ ಸಂಗೀತ ಕೊಟ್ಟಿದ್ದಾರೆ.

ಬಾಲಿವುಡ್‌ನ ದೊಡ್ಡ ಬ್ಯಾನರ್‌ನಲ್ಲಿ ಇದೇ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು