ಗುರುವಾರ , ಏಪ್ರಿಲ್ 9, 2020
19 °C

ಕೊರೊನಾ ಮುಂಜಾಗ್ರತೆ: ಅಭಿಮಾನಿಗಳನ್ನು ಭಾನುವಾರ ಭೇಟಿ ಮಾಡುವುದಿಲ್ಲ ಎಂದ ಬಿಗ್ ಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Amitabh Bachchan

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್  ಭಾನುವಾರ ತಮ್ಮ ನಿವಾಸ ಜಲ್ಸಾದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಗ್ ಬಿ ಈ ತೀರ್ಮಾನ ಕೈಗೊಂಡಿದ್ದಾರೆ.  

ತಮ್ಮ ನಿರ್ಧಾರವನ್ನು ಟ್ವೀಟ್ ಮೂಲಕ ತಿಳಿಸಿರುವ ಬಚ್ಚನ್, ಅಭಿಮಾನಿಗಳು ಭಾನುವಾರದ ಭೇಟಿಗಾಗಿ 'ಜಲ್ಸಾ'ದ ಗೇಟ್ ಬಳಿ ಬರಬೇಡಿ. ನಾನು ಬರುವುದಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ, ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ಮುಂಬೈಯಲ್ಲಿರುವ ತಮ್ಮ ನಿವಾಸದಲ್ಲಿ ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವ ಕಾರ್ಯಕ್ರಮವನ್ನು ಹಲವಾರು ವರ್ಷದಿಂದ ಬಚ್ಚನ್ ನಡೆಸಿಕೊಂಡು ಬರುತ್ತಿದ್ದಾರೆ. ಮನೆಯ ಮಹಡಿಗೆ ಬಂದು ಅಮಿತಾಬ್ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಆ ಭಾನುವಾರ ತಮ್ಮ ಪ್ರೀತಿಯ ನಟನನ್ನು ಕಾಣಲು ಅಭಿಮಾನಿಗಳ ಸಮೂಹವೇ ಇಲ್ಲಿ ಸೇರುತ್ತದೆ. 

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಇಲ್ಲಿಯವರಿಗೆ 93  ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.  ಕೊರೊನಾ ವೈರಸ್‌ನ್ನು ಅಧಿಸೂಚಿತ ವಿಪತ್ತು ಎಂದು ಘೋಷಿಸಿರುವ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರಿಗೆ ಹೇಳಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು