ಮಂಗಳವಾರ, ಮೇ 26, 2020
27 °C

ಸಿನಿಮಾ ಕಾರ್ಮಿಕರಿಗೆ ₹37 ಲಕ್ಷ ದೇಣಿಗೆ ನೀಡಿದ ನಿಖಿಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಚಿತ್ರೀಕರಣ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ಕಷ್ಟದಲ್ಲಿರುವ ಚಿತ್ರ ಕಾರ್ಮಿಕರಿಗಾಗಿ ನಟ ನಿಖಿಲ್‌ ಕುಮಾರಸ್ವಾಮಿ ಅವರು ₹ 37 ಲಕ್ಷ ದೇಣಿಗೆ ನೀಡಿದ್ದಾರೆ.

ಚಿತ್ರರಂಗದಲ್ಲಿ ದುಡಿಯುತ್ತಿರುವ 20ಕ್ಕೂ ಅಧಿಕ ಕಾರ್ಮಿಕ ಸಂಘಟನೆಗಳ ಸದಸ್ಯರಿಗೆ ಈ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಿ ಅವರ ಬ್ಯಾಂಕ್‌ ಖಾತೆಗಳಿಗೆ ಹಾಕಲಾಗುತ್ತದೆ. ಈ ದೇಣಿಗೆಯಲ್ಲಿ ₹ 32 ಲಕ್ಷ ಚಲನಚಿತ್ರ ಕಾರ್ಮಿಕರಿಗೆ ಹಾಗೂ ₹ 5 ಲಕ್ಷ ಕಿರುತೆರೆ ಕಲಾವಿದರಿಗೆ ಸಂದಾಯವಾಗಲಿದೆ.

ತಂದೆ ಎಚ್‌.ಡಿ.ಕುಮಾರಸ್ವಾಮಿ ಅವರ ಸಲಹೆಯಂತೆ ನಿಖಿಲ್‌ ಈ ದೇಣಿಗೆ ನೀಡಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ಚಲನಚಿತ್ರ ಕಾರ್ಮಿಕರ ಒಕ್ಕೂಟದ ಕಾರ್ಯದರ್ಶಿ ರವೀಂದ್ರನಾಥ್ ಅವರಿಗೆ ಈ ಕುರಿತ ಚೆಕ್‌ ಹಸ್ತಾಂತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು