ಕನ್ನಡ ಚಿತ್ರರಂಗಕ್ಕೆ ‘ಯುವರಾಜ’ ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್. ಶ್ರೀನಿವಾಸ್ ನಿರ್ಮಾಣದ ‘ಕಾಟನ್ ಪೇಟೆ ಗೇಟ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ - ಹಾಡುಗಳ ಬಿಡುಗಡೆ ನಡೆಯಿತು.

‘ನಮ್ಮ ಆರ್.ಎಸ್. ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ ‘ಯುವರಾಜ’ ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ‘ಯುವರಾಜ’ ಚಿತ್ರ ನಿರ್ದೇಶನ ಮಾಡಿದ್ದರು. ಈಗ ಅವರ ಬಳಿ ಕೆಲಸ ಮಾಡಿರುವ ವೈ.ರಾಜಕುಮಾರ್ ನಿರ್ದೇಶನದಲ್ಲಿ ‘ಕಾಟನ್ ಪೇಟೆ ಗೇಟ್’ ಚಿತ್ರ ನಿರ್ಮಾಣ ಮಾಡಿದ್ದೇನೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಸೆಪ್ಟೆಂಬರ್ 9ರಂದು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಿರ್ಮಾಪಕ ಆರ್.ಎಸ್. ಶ್ರೀನಿವಾಸ್.

‘ ‘ಕಾಟನ್ ಪೇಟೆ ಗೇಟ್’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ ಅಂದರೆ ಅದಕ್ಕೆ ನಾನೊಬ್ಬ ಕಾರಣ ಅಲ್ಲ, ನನ್ನ ಇಡೀ ಚಿತ್ರತಂಡದ ಶ್ರಮ’ ಎಂದರು ನಿರ್ದೇಶಕ ವೈ. ರಾಜಕುಮಾರ್.

‘ಈ ಚಿತ್ರ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಆದರೆ ಮೊದಲು ಆರಂಭವಾಗಿದ್ದು ಕನ್ನಡದಲ್ಲಿ. ಇಲ್ಲಿನ ಅರಣ್ಯ ಪ್ರದೇಶ, ಸುಂದರವಾದ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಇದೊಂದು ಆ್ಯಕ್ಷನ್, ಕಾಮಿಡಿ, ಸಸ್ಪೆನ್ಸ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಕಮರ್ಷಿಯಲ್ ಚಿತ್ರ. ರಾಜಕುಮಾರ್ ಬಹಳ ಚೆನ್ನಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನನಗೆ ತುಂಬಾ ಖುಷಿಯಾಗಿದೆ’ ಎನ್ನುತ್ತಾರೆ ನಾಯಕ ವೇಣುಗೋಪಾಲ್.

ಸಂಗೀತ ನಿರ್ದೇಶಕ ಪ್ರಸು, ಛಾಯಾಗ್ರಾಹಕ ಯೋಗಿ ರೆಡ್ಡಿ, 8 ಪಿಎಂಸಾಯಿಕುಮಾರ್, ಕಟ್ಟಪ್ಪ, ರಘು ಚಿತ್ರತಂಡದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.