ಬುಧವಾರ, ಮೇ 25, 2022
26 °C

ಕರ್ಫ್ಯೂ ರದ್ದು: ಚಿತ್ರಮಂದಿರಗಳಲ್ಲಿ ಶೇ 100 ರಷ್ಟು ಪ್ರೇಕ್ಷಕರಿಗಿಲ್ಲ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ ಜನವರಿ 31 ರಿಂದ ರಾತ್ರಿ ಕರ್ಪ್ಯೂ ರದ್ದು ಮಾಡಲು ಸರ್ಕಾರ  ನಿರ್ಧರಿಸಿದ್ದು, ಚಲನಚಿತ್ರ ಮಂದಿರಗಳಲ್ಲಿ ಶೇ 50 ರಷ್ಟು ಪ್ರೇಕ್ಷಕರ ಸಿನಿಮಾ ವೀಕ್ಷಣೆಯನ್ನು ಮುಂದುವರೆಸಲಾಗಿದೆ.

ಕೋವಿಡ್-19ರ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚಿತ್ರಮಂದಿರಗಳಲ್ಲಿ ಶೇಕಡಾ 50ರ ನಿಯಮ ಮುಂದುವರಿಕೆಗೆ ತೀರ್ಮಾನಿಸಲಾಗಿದೆ.

ಈಗಾಗಲೇ ವಾರಾಂತ್ಯ ಕರ್ಪ್ಯೂ ರದ್ದು ಮಾಡಲಾಗಿದೆ. ಸೋಮವಾರದಿಂದ ರಾತ್ರಿ ಕರ್ಪ್ಯೂ ರದ್ದಾಗಲಿದೆ ಆದರೆ, ಚಿತ್ರಮಂದಿರಗಳಲ್ಲಿ ಶೇಕಡಾ 50ರ ನಿಯಮ ಮುಂದುವರೆದಿರುವುದು ಏಕೆ ಎಂದು ಸಿನಿಮಾ ಕ್ಷೇತ್ರದ ಗಣ್ಯರು ಪ್ರಶ್ನೆ ಮಾಡಿದ್ದಾರೆ. 

ಚಲನಚಿತ್ರ ಮಂದಿರಗಳಲ್ಲಿ ತಕ್ಷಣಕ್ಕೆ ಶೇ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ಸಿನಿಮಾ ಉದ್ಯಮದವರು ಹೇಳುತ್ತಿದ್ದಾರೆ. 

ಇದನ್ನೂ ಓದಿ: 

ಈಗ ಶೇ 50 ರಷ್ಟು ಪ್ರೇಕ್ಷಕರಿಗೆ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಲಾಗಿದ್ದು, ಅದನ್ನು ಮುಂದುವರಿಸಲಾಗುವುದು. ಶೇ 100 ರಷ್ಟು ಅವಕಾಶ ನೀಡಬೇಕೆಂಬ ಬೇಡಿಕೆಯ ಬಗ್ಗೆ ತಜ್ಞರ ಸಮಿತಿ ನಿರ್ಧರಿಸಬೇಕಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 

ಸರ್ಕಾರದ ಈ ತಿರ್ಮಾನದಿಂದ ಸಿನಿಮಾ ರಂಗದ ನೌಕರರು, ತಂತ್ರಜ್ಞರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹಲವರು ಹೇಳಿದ್ದಾರೆ. 

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು