ಹಣ, ಕೊಡುಗೆ ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ: ಉಪ್ಪಿ ಫೌಂಡೇಷನ್

ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೀಡಾದ ಸಾವಿರಾರು ಜನರಿಗೆ, ಚಿತ್ರರಂಗದ ಕಲಾವಿದರು ಹಾಗೂ ಕಾರ್ಮಿಕರಿಗೆ ನಟ ಉಪೇಂದ್ರ ನೆರವಾಗಿದ್ದರು. ಇವರ ಈ ಕಾರ್ಯಕ್ಕೆ ಹಲವು ನಟ, ನಟಿಯರು ಹಾಗೂ ಸಾಮಾನ್ಯ ಜನರೂ ಕೈಜೋಡಿಸಿದ್ದರು. ಇದೀಗ ಯಾವುದೇ ಹಣ ಹಾಗೂ ಕೊಡುಗೆಗಳನ್ನು ನೀಡಬೇಡಿ ಎಂದು ಉಪ್ಪಿ ಫೌಂಡೇಷನ್ ಪರವಾಗಿ ಉಪೇಂದ್ರ ಕೇಳಿಕೊಂಡಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಉಪೇಂದ್ರ, ‘ಇಲ್ಲಿಯವರೆಗೂ ನಾವು ಯಾರನ್ನೂ ಏನೂ ಕೇಳದಿದ್ದರೂ ತುಂಬಾ ಹೃದಯವಂತರು ನಮ್ಮ ಮೂಲಕ ವಿತರಣೆ ಆಗಲೆಂದು ದಿನಸಿ, ಹಣ್ಣು–ತರಕಾರಿಯನ್ನು ಕೊಟ್ಟಿದ್ದಾರೆ. ನಮ್ಮ ಉಪ್ಪಿ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್‌ಗೆ ಧನಸಹಾಯವನ್ನೂ ಮಾಡಿದ್ದಾರೆ. ಅವುಗಳೆಲ್ಲವನ್ನೂ ಸೂಕ್ತವಾಗಿ ಬೇರೆಬೇರೆ ಕಡೆ ಸಂಕಷ್ಟದಲ್ಲಿರುವವರಿಗೆ ವಿತರಿಸಲಾಗಿದೆ, ಇನ್ನೂ ವಿತರಿಸಲಾಗುತ್ತಿದೆ. ಸಹೃದಯತೆ ಮೆರೆದ ತಮಗೆಲ್ಲರಿಗೂ ಧನ್ಯವಾದಗಳು. ಇನ್ನು ಮುಂದೆ ತಾವುಗಳು ಯಾರಿಗಾದರೂ ಸಹಾಯ ಮಾಡಬೇಕೆಂದರೆ ನಿಮ್ಮ ಸುತ್ತಮುತ್ತ ಸಂಕಷ್ಟದಲ್ಲಿರುವವರನ್ನು ಗುರುತಿಸಿ ನೀವೇ ನೇರವಾಗಿ ಸಹಾಯ ಮಾಡಿ. ನಾವು ಉಪ್ಪಿ ಫೌಂಡೇಷನ್‌ಗೆ ಹಣ ಮತ್ತು ಯಾವುದೇ ಕೊಡುಗೆಗಳನ್ನು ಇನ್ನು ಮುಂದೆ ಸ್ವೀಕರಿಸುವುದನ್ನು ನಿಲ್ಲಿಸುತ್ತಿದ್ದೇವೆ. ಇಲ್ಲಿಯವರೆಗೂ ಉಪ್ಪಿ ಫೌಂಡೇಷನ್‌ಗೆ ಉಪೇಂದ್ರರವರ ಹಣ, ನಿಮ್ಮೆಲ್ಲರಿಂದ ಬಂದಂತಹ ಹಣ, ಅದರ ಖರ್ಚು ಹಾಗೂ ಖಾತೆ ವಿವರದ ಮಾಹಿತಿಯನ್ನು ಸದ್ಯದಲ್ಲೇ ಬಹಿರಂಗಪಡಿಸುತ್ತೇವೆ’ ಎಂದು ಉಲ್ಲೇಖಿಸಿದ್ದಾರೆ.
ಧನ್ಯವಾದಗಳು 🙏🙏🙏 pic.twitter.com/YvRHbxZHPE
— Upendra (@nimmaupendra) June 3, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.