ಗುರುವಾರ , ಆಗಸ್ಟ್ 18, 2022
23 °C

Covid-19: ಸಂಕಷ್ಟದಲ್ಲಿರುವ ಚಲನಚಿತ್ರ ರಂಗದ ಕುಟುಂಬಕ್ಕೆ ಉಪ್ಪಿ ನೆರವು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಕನ್ನಡ ಚಲನಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರು ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದಾರೆ. ಅವರಿಗೆ ನಟ ಉಪೇಂದ್ರ ನೆರವಿನ ಹಸ್ತ ಚಾಚಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪ್ಪಿ, 'ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ: 

 

 

 

ಕಿಟ್ ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ಥರನ್ನು ಸಂಪರ್ಕಿಸುವಂತೆ ಉಪ್ಪಿ ಮನವಿ ಮಾಡಿದ್ದಾರೆ.

 

ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಲಾವಿದರು, ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದೆ. ಅಂತವರಿಗೆ ನೆರವಾಗುವ ಮೂಲಕ ಉಪ್ಪಿ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು