ಬುಧವಾರ, ಡಿಸೆಂಬರ್ 7, 2022
22 °C

ಕೋವಿಡ್‌: ಐಶ್ವರ್ಯಾ ರೈ, ಮಗಳು ಆರಾಧ್ಯಾ ನಾನಾವತಿ ಆಸ್ಪತ್ರೆಗೆ ದಾಖಲು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನಟಿ ಐಶ್ವರ್ಯಾ ರೈ ಬಚ್ಚನ್‌ ಮತ್ತು ಅವರು ಮಗಳು ಆರಾಧ್ಯಾ

ಮುಂಬೈ: ನಟಿ ಐಶ್ವರ್ಯಾ ರೈ ಬಚ್ಚನ್‌ ಮತ್ತು ಅವರು ಮಗಳು ಆರಾಧ್ಯಾ ನಗರದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್‌ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರು ಕ್ವಾರಂಟೈನ್‌ ಆಗಿದ್ದರು. ಮೂಲಗಳ ಪ್ರಕಾರ, ಇಬ್ಬರಿಗೂ ಉಸಿರಾಟದ ಸಮಸ್ಯೆ ಉಂಟಾಗಿದೆ.

ಐಶ್ವರ್ಯಾ ರೈ ಪತಿ, ನಟ ಅಭಿಷೇಕ್‌ ಬಚ್ಚನ್‌ ಮತ್ತು ಮಾವ ಅಮಿತಾಬ್‌ ಬಚ್ಚನ್‌ ಈಗಾಗಲೇ ನಾನಾವತಿ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಾರೆ.

ಜುಲೈ 12ರಂದು ಟ್ವೀಟ್‌ ಮಾಡಿದ್ದ ಅಭಿಷೇಕ್‌ ಬಚ್ಚನ್‌, 'ಐಶ್ವರ್ಯ ಮತ್ತು ಆರಾಧ್ಯ ಇಬ್ಬರಿಗೂ ಕೋವಿಡ್‌–19 ದೃಢಪಟ್ಟಿದೆ. ಅವರು ಮನೆಯಲ್ಲಿಯೇ ಕ್ವಾರಂಟೈನ್‌ ಆಗಲಿದ್ದಾರೆ. ನನ್ನ ತಾಯಿಗೆ ಸೋಂಕು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ವೈದ್ಯರ ಸಲಹೆ ಮೇರೆ ನಾನು ಮತ್ತು ನನ್ನ ತಂದೆ ಆಸ್ಪತ್ರೆಯಲ್ಲಿಯೇ ಇದ್ದೇವೆ' ಎಂದಿದ್ದರು.

ಅಮಿತಾಬ್‌ ಬಚ್ಚನ್‌ ಇತ್ತೀಚೆಗೆ ಸಾಮಾಜಿಕ ಮಾಧ್ಯಮದ ಮೂಲಕ ಎಲ್ಲ ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದ ಅರ್ಪಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು