ಸೋಮವಾರ, ಜೂನ್ 14, 2021
22 °C

ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡಿದ್ದರು.

ನೋಡಿ: 

ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದೇನೆ. ಕೋವಿಡ್ ಬಿಕ್ಕಟ್ಟಿನಿಂದ ಹೊರಬರಲು ಸರ್ಕಾರವು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕು ಎಂದು ರಜನಿಕಾಂತ್ ಕರೆ ನೀಡಿದ್ದಾರೆ.

ಈ ಮೊದಲು ಕೊರೊನಾವೈರಸ್ ವಿರುದ್ಧ ಹೋರಾಡಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡುವಂತೆ ಸ್ಟಾಲಿನ್ ಅವರು ಜನರಿಗೆ ಮನವಿ ಮಾಡಿದ್ದರು.

ಭಾನುವಾರದಂದು ಕೋವಿಡ್ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ 13 ಸದಸ್ಯರ ಶಾಸಕಾಂಗ ಸಲಹಾ ಸಮಿತಿಯನ್ನು ರಚಿಸಲಾಗಿತ್ತು.

ಇದನ್ನೂ ಓದಿ: 

ತಮಿಳುನಾಡಿನಲ್ಲಿ ಭಾನುವಾರದಂದು ಹೊಸದಾಗಿ 12,450 ಸೋಂಕು ಪ್ರಕರಣಗಳು ವರದಿಯಾಗಿದ್ದು, 20,905 ಮಂದಿ ಚೇತರಿಸಿಕೊಂಡಿದ್ದಾರೆ. ಇದೇ ಅವಧಿಯಲ್ಲಿ 303 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿವೆ.

ತಮಿಳುನಾಡಿನಲ್ಲಿ ಈಗ 2,07,789 ಸಕ್ರಿಯ ಪ್ರಕರಣಗಳಿದ್ದು, 17,359 ಮಂದಿ ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು