ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರವಿಚಂದ್ರ ಪುತ್ರ ಮನುರಂಜನ್ ನಟನೆಯ ‘ಪ್ರಾರಂಭ’ ಚಿತ್ರ ಮೇ 13ರಂದು ಬಿಡುಗಡೆ

Last Updated 22 ಏಪ್ರಿಲ್ 2022, 12:34 IST
ಅಕ್ಷರ ಗಾತ್ರ

ಕ್ರೇಜಿಸ್ಟಾರ್ ರವಿಚಂದ್ರ ಪುತ್ರ ಮನುರಂಜನ್ ನಾಯಕರಾಗಿ ನಟಿಸಿರುವ ‘ಪ್ರಾರಂಭ’ ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.

ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೇ ಬರೆದಿದ್ದಾರೆ.

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT