ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಅರುಂಧತಿಗೆ ಅಪಘಾತ: ಪರಿಸ್ಥಿತಿ ಗಂಭೀರ

Published 19 ಮಾರ್ಚ್ 2024, 2:27 IST
Last Updated 19 ಮಾರ್ಚ್ 2024, 2:27 IST
ಅಕ್ಷರ ಗಾತ್ರ

ಚೆನ್ನೈ: ತಮಿಳು ಚಿತ್ರ ಸೈತಾನ್‌ ಖ್ಯಾತಿಯ ನಟಿ ಅರುಂಧತಿ ನಾಯರ್, ಬೈಕ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರ್ಚ್ 14ರಂದು ಚೆನ್ನೈ– ಕೋವಲಂ ಬೈಪಾಸ್ ರಸ್ತೆಯಲ್ಲಿ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುವಾಗ ಅಪಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಈ ಅಪಘಾತದ ಬಗ್ಗೆ ತಮಿಳು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ನಟಿಯ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿಗಳು ಬಂದಿರಲಿಲ್ಲ

ಇದೀಗ ನಟಿಯ ಸಹೋದರಿ ಆರತಿ ನಾಯರ್‌ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಅರುಂಧತಿ ನಾಯರ್‌ಗೆ ಅಪಘಾತವಾಗಿರುವುದನ್ನು ಖಚಿತಪಡಿಸಿದ್ದಾರೆ.

ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳಲ್ಲಿ ಬಂದಿರುವ ವರದಿಗಳು ಸತ್ಯವಾಗಿವೆ. ಅರುಂಧತಿ ನಾಯರ್ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದ ಆರತಿ ನಾಯರ್‌ ಫೋಸ್ಟ್‌ ಹಾಕಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT