ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದೇಶಕ ವಿನಯ್ ಅವರ ‘ದಿ’ ಸಿನಿಮಾ ಮಾರ್ಚ್‌ನಲ್ಲಿ ತೆರೆಗೆ

Last Updated 15 ಜನವರಿ 2023, 10:37 IST
ಅಕ್ಷರ ಗಾತ್ರ

ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರುತ್ತಿದ್ದು, ಚಿತ್ರದ ಟ್ರೈಲರ್‌ ಬಿಡುಗಡೆ ಆಗಿದೆ. ‘ದಿ’ ಚಿತ್ರಕ್ಕೆ ವಿನಯ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲ್ಲದೇ ಸೆಟ್ಟೇರಿ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ನಡೆಸಿದೆ. ಈಗ ಟ್ರೈಲರ್‌ ಬಿಡುಗಡೆ ಆಗಿದೆ.

‘ಈ ಚಿತ್ರ ಡಾಲರ್‌ನ ಸುತ್ತ ನಡೆಯುವ ಪ್ರೇಮಕಥೆ. ಮುಕ್ಕಾಲು ಭಾಗ ಸಿನಿಮಾ ಕಾಡಿನಲ್ಲಿ ಚಿತ್ರೀಕರಣಗೊಂಡಿದೆ. ‘ದಿ’ ಕೋವಿಡ್ ಸಮಯದಲ್ಲಿ ಸಿದ್ಧವಾದ ಕಥೆ. ‘ದಿ’ ಅಂದ್ರೆ ದಿವ್ಯ ಮತ್ತು ದೀಪಕ್. ವಾರಾಂತ್ಯದಲ್ಲಿ ಕಾಡಿಗೆ ಹೋದ ಪ್ರೇಮಿಗಳ ಜೀವನದಲ್ಲಿ ಏನೇನು ಆಗುತ್ತದೆ, ಅವರಿಗೆ ಗೊತ್ತಿಲ್ಲದೇ ಅವರ ಜೀವನದಲ್ಲಿ ಇನ್ಯಾರ ಪ್ರವೇಶ ಆಗುತ್ತದೆ, ಮುಂದೆ ಅವರೇನಾದರು ಎಂಬುದು ತಿರುಳು. ಚಿತ್ರದಲ್ಲಿ ಆರು ಮುಖ್ಯ ಪಾತ್ರಗಳಿವೆ. ಎಲ್ಲಾ ಪಾತ್ರಗಳಿಗೂ ಸಮನಾದ ಪ್ರಾಮುಖ್ಯತೆ ಇದೆ. ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಸಿನಿಮಾ ತೆರೆಗೆ ತರಲು ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದರು ಚಿತ್ರದ ನಿರ್ದೇಶಕ ವಿನಯ್.

ದಿಶಾ ಈ ಚಿತ್ರದ ನಾಯಕಿ. ‘ದೇವರ ನಾಡಲ್ಲಿ’, ‘ಎಸ್‌ಎಲ್‌ವಿ’ ಚಿತ್ರಗಳಲ್ಲಿ ನಟಿಸಿದ ಅನುಭವ ಅವರದ್ದು. ನಾಗೇಂದ್ರ ಅರಸ್ ಅವರು ಅರಣ್ಯಾಧಿಕಾರಿ ಪಾತ್ರದಲ್ಲಿದ್ದಾರೆ. ಭರತ್ ಅವರ ಛಾಯಾಗ್ರಹಣವಿದೆ.

ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ ‘ದಿ’ ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಚಿತ್ರದ ಟ್ರೈಲರ್‌ ನೋಡಲು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT