ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ ಶ್ರೀಧರ್‌ ಆತ್ಮಕಥೆ ಆಧಾರಿತ ಸಿನಿಮಾ ಹೆಡ್‌ಬುಷ್‌ನಲ್ಲಿ ಹೀಗಿದ್ದಾರೆ ಡಾಲಿ

Last Updated 23 ಆಗಸ್ಟ್ 2021, 11:07 IST
ಅಕ್ಷರ ಗಾತ್ರ

ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿ ನಿರ್ಮಾಣಗೊಳ್ಳುತ್ತಿರುವ ಚಿತ್ರ ‘ಹೆಡ್‌ಬುಷ್‌’–ದಿ ರೈಸ್‌ ಆ್ಯಂಡ್‌ ರೈಸ್‌ ಆಫ್‌ ಬೆಂಗಳೂರು ಅಂಡರ್‌ವಲ್ಡ್‌ ಭಾಗ–1ರ ಟೀಸರ್‌ ಹಾಗೂ ಫಸ್ಟ್‌ಲುಕ್‌ ಬಿಡುಗಡೆಯಾಗಿದ್ದು, ಎಂ.ಪಿ ಜಯರಾಜ್‌ ಪಾತ್ರದಲ್ಲಿ ನಟ ‘ಡಾಲಿ’ ಧನಂಜಯ್‌ ಕಾಣಿಸಿಕೊಂಡಿದ್ದಾರೆ.

ಟೀಸರ್‌ನಲ್ಲಿ ‘ಜಯರಾಜ್‌ನನ್ನು ರಾಜಕಾರಣಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವನೊಬ್ಬ ನಟೋರಿಯಸ್‌ ರೌಡಿ. ಅವನನ್ನು ಮಟ್ಟ ಹಾಕಲು ಸರ್ಕಾರದ ಬೆಂಬಲ ಬೇಕಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಗರುಡಾಚಾರ್‌ ತಿಳಿಸಿದ್ದಾರೆ’ ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ಜನರೆದುರು ಆಗಮಿಸುವಂತೆ ಎಂ.ಪಿ ಜಯರಾಜ್‌ ಪಾತ್ರವನ್ನು ಪರಿಚಯಿಸಲಾಗಿದೆ. ಎರಡು ಭಾಗದಲ್ಲಿ ಈ ಚಿತ್ರ ತೆರೆಕಾಣಲಿದೆ.

ಹೆಡ್‌ಬುಷ್‌ನಲ್ಲಿನ ಪಾತ್ರಕ್ಕಾಗಿ ಧನಂಜಯ್‌ ಅವರು ತೂಕ ಹೆಚ್ಚಿಸಿಕೊಂಡಿದ್ದು, ನಡೆಯಲ್ಲೂ ಬದಲಾವಣೆ ಮಾಡಿಕೊಂಡಿದ್ದಾರೆ. ಡಾಲಿ ಪಿಕ್ಚರ್ಸ್‌ ಮತ್ತು ಸೋಮಣ್ಣ ಟಾಕೀಸ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ, ಅಗ್ನಿ ಶ್ರೀಧರ್‌ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಶರಣ್‌ ರಾಜ್‌ ಸಂಗೀತವಿದೆ. ತೆಲುಗಿನ ಖ್ಯಾತ ನಟಿ ಪಾಯಲ್‌ ರಾಜ್‌ಪುತ್‌ ನಾಯಕಿಯಾಗಿ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT