ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋಟಿ’ ಒಡೆಯನಾದ ‘ಡಾಲಿ’ ಧನಂಜಯ

Published 10 ಏಪ್ರಿಲ್ 2024, 23:30 IST
Last Updated 10 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

‘ಗುರುದೇವ್‌ ಹೊಯ್ಸಳ’ ಸಿನಿಮಾ ಬಳಿಕ ನಟ ‘ಡಾಲಿ’ ಧನಂಜಯ ಹೊಸ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮೇಶ್ವರ್‌ ಗುಂಡ್ಕಲ್‌(ಪರಮ್‌) ಧನಂಜಯಗೆ ಆ್ಯಕ್ಷನ್‌ ಕಟ್‌ ಹೇಳಿದ್ದು, ಏ.13ರಂದು ‘ಕೋಟಿ’ ಸಿನಿಮಾದ ಟೀಸರ್‌ ಬಿಡುಗಡೆಯಾಗಲಿದೆ. 

ಸದ್ಯ ‘ಉತ್ತರಕಾಂಡ’ ಪ್ರಾಜೆಕ್ಟ್‌ನಲ್ಲಿ ತೊಡಗಿಸಿಕೊಂಡಿರುವ ಧನಂಜಯ ‘ಕೋಟಿ’ಯ ಒಡೆಯನಾಗಿ ತೆರೆ ಮೇಲೆ ಬರಲಿದ್ದಾರೆ. ಯುಗಾದಿ ಹಬ್ಬದ ದಿನ ‘ಕೋಟಿ’ ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಐನೂರು ರೂಪಾಯಿ ನೋಟುಗಳಲ್ಲಿ ಶೀರ್ಷಿಕೆ ಮೂಡಿಬಂದಿದ್ದು, ಫಸ್ಟ್‌ಲುಕ್‌ನಲ್ಲಿ ಧನಂಜಯ ಕಣ್ಣುಗಳನ್ನು ಮಾತ್ರ ಬಳಸಿಕೊಳ್ಳಲಾಗಿದೆ. ಕೋಟಿ ಕನಸು ಕಾಣುವ ಒಬ್ಬ ಸಾಮಾನ್ಯನ ಕಥೆ ಇದು ಎನ್ನುವಂತೆ ಮೂಡಿಬಂದಿದೆ. ‘ಕೋಟಿ’ ಒಂದೆರಡು ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಸಿನಿಮಾಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ನಿರ್ಮಾಣ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಸಾಹಿತ್ಯ, ‘2018’, ‘777 ಚಾರ್ಲಿ’ ಖ್ಯಾತಿಯ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಚಿತ್ರಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT