ಭಾನುವಾರ, ಡಿಸೆಂಬರ್ 4, 2022
21 °C

ಧನಂಜಯ್‌ ನಟನೆಯ ‘ಜಮಾಲಿಗುಡ್ಡ’ ಸೆ.9ಕ್ಕೆ ರಿಲೀಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಡಾಲಿ’ ಧನಂಜಯ್‌ ನಟನೆಯ ‘Once Upon A Time In ಜಮಾಲಿಗುಡ್ಡ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಿನಿಮಾವನ್ನು ಸೆ.9ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ, ಶಿವಮೊಗ್ಗದಲ್ಲಿ 80 ದಿನಗಳ ಚಿತ್ರೀಕರಣ ನಡೆದಿದೆ. ಮಾತಿನ ಜೋಡಣೆ ಸಹ ಅಂತಿಮ ಹಂತದಲ್ಲಿದೆ. ಇದು 90ರ ದಶಕದಲ್ಲಿ ನಡೆಯುವ ಕಥೆ. ಬಾರ್ ಸಪ್ಲೈಯರ್‌ ಪಾತ್ರದಲ್ಲಿ ಧನಂಜಯ್‌ ಇಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಡಾಲಿ ಅವರ ಫಸ್ಟ್‌ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದರು. ನಾಯಕಿಯಾಗಿ ಅದಿತಿ ಪ್ರಭುದೇವ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಭಾವನ ರಾಮಣ್ಣ, ‘ಕಾಮಿಡಿ ಕಿಲಾಡಿಗಳು’ ಸಂತು, ತ್ರಿವೇಣಿ, ಪ್ರಾಣ್ಯ, ನಂದ ಗೋಪಾಲ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಕುಶಾಲ್ ಗೌಡ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ಕುಶಾಲ್ ಗೌಡ ಅವರೇ ಬರೆದಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದೆ. ಕಾರ್ತಿಕ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು