ಭಾನುವಾರ, ಫೆಬ್ರವರಿ 5, 2023
21 °C

Head Bush| ಡಾಲಿ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಟ್ರೈಲರ್‌ ಬಿಡುಗಡೆ

‌ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ.

‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ ಭೂಗತ ದೊರೆ ಎಂ.ಪಿ ಜಯರಾಜ್‌ ಪಾತ್ರವನ್ನು ಧನಂಜಯ್‌ ಅವರು ನಿಭಾಯಿಸಿದ್ದಾರೆ. ಚಿತ್ರವನ್ನು ಶೂನ್ಯ ನಿರ್ದೇಶಿಸಿದ್ದಾರೆ.

ಸ್ವತಃ ಅಗ್ನಿ ಶ್ರೀಧರ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್‌ ಪುತ್ರ ಅಜಿತ್‌ ಜಯರಾಜ್‌ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರಾದರೂ, ಅದೆಲ್ಲವನ್ನೂ ಮೀರಿ ಇಂದು ಚಿತ್ರದ ಬಿಡುಗಡೆಯಾಗಿದೆ. ಟ್ರೈಲರ್‌‌ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ.

ಸಿನಿಮಾ ಅಕ್ಟೋಬರ್‌ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

ಇದನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.