ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೀಪಾವಳಿಗೆ ‘ಡಾಲಿ’ ಧನಂಜಯ ನಟನೆಯ 26ನೇ ಸಿನಿಮಾ ‘ಜೀಬ್ರಾ’ ಬಿಡುಗಡೆ

Published : 19 ಸೆಪ್ಟೆಂಬರ್ 2024, 21:21 IST
Last Updated : 19 ಸೆಪ್ಟೆಂಬರ್ 2024, 21:21 IST
ಫಾಲೋ ಮಾಡಿ
Comments

‘ಅಣ್ಣ ಫ್ರಂ ಮೆಕ್ಸಿಕೊ’, ‘ಉತ್ತರಕಾಂಡ’, ‘ಜಿಂಗೋ’, ‘ನಾಡಪ್ರಭು ಕೆಂಪೇಗೌಡ’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ನಟ ‘ಡಾಲಿ’ ಧನಂಜಯ ನಟನೆಯ 26ನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 

ಧನಂಜಯ ಹಾಗೂ ತೆಲುಗಿನ ನಟ ಸತ್ಯದೇವ್ ನಟನೆಯ ಮಲ್ಟಿಸ್ಟಾರ್ ಸಿನಿಮಾ ‘ಜೀಬ್ರಾ’ ಅ.31ರಂದು ತೆರೆಕಾಣಲಿದೆ. ತೆಲುಗಿನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.  

‘ಜೀಬ್ರಾ’ದ ಮೋಷನ್ ಪೋಸ್ಟರ್ ರಿಲೀಸ್‌ ಆಗಿದ್ದು, ಇದರಲ್ಲಿ ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿಶಂಕರ್, ಧನಂಜಯ ಮತ್ತು ಸತ್ಯದೇವ್ ಅವರ ಪಾತ್ರಗಳನ್ನು ಪರಿಚಯಿಸಲಾಗಿದೆ. ಜೀಬ್ರಾ ಸಿನಿಮಾವನ್ನು  ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕ್ರೈಂ ಮತ್ತು ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದೆ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರದ್ದೂ ಇದು 26ನೇ ಸಿನಿಮಾ ಎಂಬುದು ವಿಶೇಷ ಎಂದಿದೆ ಚಿತ್ರತಂಡ.

ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್. ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಚಿತ್ರಗ್ರಹಣವಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT