ಭಾನುವಾರ, ಏಪ್ರಿಲ್ 11, 2021
32 °C

ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ದಾರಿ ಯಾವುದಯ್ಯ ವೈಕುಂಠಕೆ’ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರತಂಡದಿಂದ ಹೊಸ ಸುದ್ದಿ ಹೊರಬಂದಿದೆ.‌ ಈ ಚಿತ್ರವು 6 ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ.

ರಾಜಸ್ಥಾನ ಅಂತರಾಷ್ಟ್ರೀಯ ಚಿತ್ರೋತ್ಸವ, ನಾವ್ಡ ಅಂತರರಾಷ್ಟ್ರೀಯ ಚಿತ್ರೋತ್ಸವ, ಕಲರ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್, ಬೆಟ್ಟಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವ, 5ನೇ ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್‌, ಇಂಡಿಯನ್ ಇಂಟರ್ ಇಂಟರ್‌ನ್ಯಾಷನಲ್‌ ಫಿಲ್ಮ್ ಫೆಸ್ಟಿವಲ್‌ಗೆ ಆಯ್ಕೆಯಾಗಿದೆ.

ಸಿದ್ದು ಪೂರ್ಣಚಂದ್ರ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ಚಿತ್ರಮಂದಿರಗಳಿಗೂ ಬಿಡುಗಡೆ ಆಗಲಿದೆ. ದೊಡ್ಡ ಅಪರಾಧ ಹಿನ್ನೆಲೆಯ ವ್ಯಕ್ತಿಗೆ ಭಾವನೆಗಳ ಸ್ಪರ್ಶ ಕೊಟ್ಟರೆ ಅವನಲ್ಲಾಗುವ ಮಾನಸಿಕ ಬದಲಾವಣೆಗಳ ಕ್ರೋಡೀಕರಣವೇ ದಾರಿ ಯಾವುದಯ್ಯಾ ವೈಕುಂಠಕೆ ಚಿತ್ರದ ಕಥಾಸಾರಾಂಶ.

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ. ಕೊಟಗಿ ಅವರು ಚಿತ್ರ ನಿರ್ಮಿಸಿದ್ದಾರೆ. ವರ್ಧನ್ ಈ ಚಿತ್ರದಲ್ಲಿ ನಾಯಕ. ಅನುಷ, ‘ತಿಥಿ’ ಚಿತ್ರದ ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್ ಇದ್ದಾರೆ. ಲೋಕಿ ಸಂಗೀತ ನಿರ್ದೇಶನವಿದೆ. ಈ ಚಿತ್ರಕ್ಕೆ ನಿತಿನ್ ಅವರ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನ ಇದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು