ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಗೆದ್ದ ನೀರಜ್‌ ಕುರಿತು ಸಿನಿಮಾ ಮಾಡಲು ದಕ್ಷಿಣ ಕನ್ನಡದ ನಿರ್ಮಾಪಕನ ಆಸಕ್ತಿ

Last Updated 12 ಆಗಸ್ಟ್ 2021, 15:49 IST
ಅಕ್ಷರ ಗಾತ್ರ

ಮಂಗಳೂರು: ಟೋಕಿಯೊ– 2020 ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದ ಮೂಲಕ ಭಾರತಕ್ಕೆ ಅಥ್ಲೆಟಿಕ್ಸ್‌ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾ ಸಾಧನೆ ದೇಶದೆಲ್ಲೆಡೆ ಮನೆ ಮಾತು. ಅವರ ಕುರಿತು ಸಿನಿಮಾ‌ ಮಾಡಲು ನಿರ್ಮಾಪಕ, ದಕ್ಷಿಣ ಕನ್ನಡ ಜಿಲ್ಲೆಯ ಅರುಣ್‌ ರೈ ತೋಡಾರ್ ಈಗ ಮುಂದಾಗಿದ್ದಾರೆ.

ತುಳುನಾಡಿನ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಬಗ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ‘ಬಿರ್ದ್‌ದ ಕಂಬುಲ’ ಸಿನಿಮಾ ನಿರ್ಮಾಣ ಮಾಡುತ್ತಿರುವ ಅರುಣ್ ರೈ ತೋಡಾರ್, ಮತ್ತೊಂದು ಸಾಹಸಕ್ಕೆ ಅಣಿಯಾಗಿದ್ದಾರೆ. ಮಂಗಳೂರು ಎ.ಆರ್. ಪ್ರೊಡಕ್ಸನ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನೀರಜ್ ಚೋಪ್ರಾ ಕುರಿತು ಹಿಂದಿಯಲ್ಲಿ ಸಿನಿಮಾವನ್ನು ನಿರ್ಮಿಸಿ ಕನ್ನಡ, ಮಲಯಾಳಂ, ತೆಲುಗು, ತಮಿಳು ಭಾಷೆಗೆ ಡಬ್ ಮಾಡಲು ಚಿಂತನೆ ನಡೆಸಲಾಗಿದೆ. ಆ ಮೂಲಕ ದೇಶದ ಯುವ ಜನತೆಯಲ್ಲಿ ಕ್ರೀಡಾಸ್ಫೂರ್ತಿ ತುಂಬುವುದು ನಮ್ಮ ಉದ್ದೇಶ’ ಎಂದರು.

ಬಿರ್ದ್‌ದ ಕಂಬುಲು ಸಿನಿಮಾ ಮುಕ್ತಾಯದ ಬಳಿಕ ನೀರಜ್ ಕುರಿತ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT