ನಟ ಡಾಲಿ ಧನಂಜಯ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ‘ಜಿಂಗೋ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ಡೇರ್ ಡೆವಿಲ್ ಮುಸ್ತಫಾ’ ಚಿತ್ರವನ್ನು ನಿರ್ದೇಶಿಸಿದ್ದ ಶಶಾಂಕ್ ಸೋಗಲ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ರಾಜಕಾರಣಿಯಾಗಿ ಧನಂಜಯ ಕಾಣಿಸಿಕೊಂಡಿದ್ದು, ಫಸ್ಟ್‌ಲುಕ್ ಕೂಡ ಬಿಡುಗಡೆಗೊಂಡಿದೆ. ಚಿತ್ರಕ್ಕೆ ಹಾರಿಸ್ ಅಹಮದ್ ಕಥೆ ಚಿತ್ರಕಥೆ ಬರೆದಿದ್ದು, ಬಿ ನರೇಂದ್ರ ರೆಡ್ಡಿ ಹಾಗೂ ಡಾಲಿ ಧನಂಜಯ ಬಂಡವಾಳ ಹೂಡುತ್ತಿದ್ದಾರೆ.
‘ಜಿಂಗೋ ಎಂದರೆ ವ್ಯಕ್ತಿಯೋರ್ವನ ನಿಕ್ ನೇಮ್. ಆತ ರಾಜಕಾರಣಿಯಾ ಅಥವಾ ಹೋರಾಟಗಾರನಾ ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎಂದಿದೆ ಚಿತ್ರತಂಡ. ನವನೀತ್ ಶ್ಯಾಮ್ ಸಂಗೀತ, ಶರತ್ ವಸಿಷ್ಠ ಸಂಕಲನ, ರಾಹುಲ್ ರಾಯ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.
ಶಶಾಂಕ್ ಸೋಗಲ್ ನಿರ್ದೇಶನದ ಚೊಚ್ಚಲ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾವನ್ನು ಡಾಲಿ ಧನಂಜಯ ಅವರು ತಮ್ಮ ಡಾಲಿ ಪಿಕ್ಚರ್ಸ್ ವತಿಯಿಂದ ಪ್ರೆಸೆಂಟ್ ಮಾಡಿದ್ದರು.