ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋತಾಪುರಿಗೆ ಶಿವಣ್ಣನ ಬೆಂಬಲ

Published 21 ಸೆಪ್ಟೆಂಬರ್ 2023, 23:30 IST
Last Updated 21 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಜಗ್ಗೇಶ್‌, ಡಾಲಿ ಧನಂಜಯ ನಟನೆಯ ‘ತೋತಾಪುರಿ–2’ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ತೋತಾಪುರಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಧನಂಜಯ, ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕರಾಗಿದ್ದಾರೆ.

ಕಾಮಿಡಿ ಜೊತೆಗೆ ಗಟ್ಟಿಯಾದ ಸಂದೇಶ ಹೊಂದಿರುವ ‘ತೋತಾಪುರಿ–2’ ಚಿತ್ರದ ಟ್ರೇಲರ್‌ ಅನ್ನು ನಟ ಶಿವರಾಜ್‌ಕುಮಾರ್‌  ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ವಿಜಯಪ್ರಸಾದ್ ನಿರ್ದೇಶನದ ಈ ಚಿತ್ರದ ಎರಡನೇ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ, ಸುಮನಾ ರಂಗನಾಥ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಲಿಂಗ ಖ್ಯಾತಿಯ ನಿರ್ಮಾಪಕ ಕೆ.ಎ.ಸುರೇಶ್ ಬಂಡವಾಳ ಹೂಡಿದ್ದಾರೆ.

‘ತೋತಾಪುರಿ–2 ಮೊದಲ ಭಾಗಕ್ಕಿಂತ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಡಾಲಿ ಅಭಿಮಾನಿಗಳಿಗಂತೂ ಹಬ್ಬ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದು ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT