ಭಾನುವಾರ, ಏಪ್ರಿಲ್ 11, 2021
33 °C

ಚಂದನವನದಲ್ಲಿ ತಯಾರಾಗುತ್ತಿದೆ ಡಾನ್ಸ್ ಆಧಾರಿತ ಚಿತ್ರ: ಸುಶಾಂತ್ ಪೂಜಾರಿ ನಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ನಲ್ಲಿ ಈಗಾಗಲೇ ಅನೇಕ ಡಾನ್ಸ್ ಆಧಾರಿತ ಚಿತ್ರಗಳು ತೆರೆ ಕಂಡು ಪ್ರೇಕ್ಷಕರನ್ನು ರಂಜಿಸಿವೆ. ಎಬಿಸಿಡಿ, ಸ್ಟ್ರೀಟ್ ಡಾನ್ಸರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಬಾಲಿವುಡ್ ನಟ ಸುಶಾಂತ್ ಪೂಜಾರಿ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಎ. ಎಸ್‌. ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರಕ್ಕೆ ಕಿಶೋರ್‌ ಕುಮಾರ್ ಮತ್ತು ಸುಜಯ್‌ ಎಸ್‌. ಕಾಮತ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಕಿರಣ್‌ ಶೆಟ್ಟಿ, ಆಶಿಕ ಸುವರ್ಣ, ವಿನೋದ್ ಕುಮಾರ್ ಹಾಗೂ ಶಿವರಾಜ್ ಆರ್‌. ಮೊಗವೀರ ಈ ಚಿತ್ರ ಬಂಡವಾಳ ಹೂಡಲಿದ್ದಾರೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಚಿತ್ರತಂಡ ಚಿತ್ರೀಕರಣದ ತಯಾರಿಯಲ್ಲಿ ಬ್ಯುಸಿಯಾಗಿದೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು