ಬುಧವಾರ, ಜನವರಿ 19, 2022
26 °C

ನಿಶ್ವಿಕಾ ಜೊತೆ ಡಾರ್ಲಿಂಗ್ ಕೃಷ್ಣನ ‘ದಿಲ್‌ ಪಸಂದ್‌’: ಮೋಡಿ ಮಾಡಿದ ಮೊದಲ ನೋಟ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ, ಡಾರ್ಲಿಂಗ್‌ ಕೃಷ್ಣ ನಟನೆಯ ‘ದಿಲ್ ಪಸಂದ್’ ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಫಸ್ಟ್‌ಲುಕ್‌ನಲ್ಲಿನ ಡಾರ್ಲಿಂಗ್‌ ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ಜೋಡಿಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ.

ಶಿವತೇಜಸ್ ನಿರ್ದೇಶನದ ಈ‌ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಜೋಡಿಯಾಗಿ ನಿಶ್ವಿಕಾ ನಾಯ್ಡು‌ ಹಾಗೂ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಲವ್‌ ಮಾಕ್ಟೆಲ್‌ ಚಿತ್ರದ ಯಶಸ್ಸಿನ ಬಳಿಕ ಕೃಷ್ಣ ಅವರು ಬಹುತೇಕ ರೊಮ್ಯಾಂಟಿಕ್‌ ಸಿನಿಮಾಗಳಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ‘ದಿಲ್‌ಪಸಂದ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ದ್ವಿತೀಯ ಹಂತದ ‌ಚಿತ್ರೀಕರಣ‌ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಸಾಧುಕೋಕಿಲ,‌‌ ರಂಗಾಯಣ ರಘು, ತಬಲ‌ ನಾಣಿ, ಅರುಣ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು