ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾದಲ್ಲಿ ‘ಶುಗರ್ ಫ್ಯಾಕ್ಟರಿ’

Last Updated 28 ಮಾರ್ಚ್ 2021, 11:54 IST
ಅಕ್ಷರ ಗಾತ್ರ

ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಚಿತ್ರೀಕರಣ ಪ್ರವಾಸಿಗರ ಸ್ವರ್ಗವಾದ ಗೋವಾದಲ್ಲಿ ಬಿರುಸಿನಿಂದ ಸಾಗಿದೆ.

24 ದಿನಗಳ ಕಾಲ ಅದ್ಧೂರಿಯಾಗಿ ಮೂರು ಹಾಡುಗಳು, ಒಂದು ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯಲಿದೆ.
ಡಾರ್ಲಿಂಗ್ ಕೃಷ್ಣ, ನಾಯಕಿಯರಾದ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ, ಶಿಲ್ಪ ಶೆಟ್ಟಿ ಹಾಗೂ ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರು ಈ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

ಚಿತ್ರದಲ್ಲಿ ಏಳು ಹಾಡುಗಳನ್ನು ಚೇತನ್ ಕುಮಾರ್, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಅರಸು ಅಂತಾರೆ, ಚಂದನ್ ಶೆಟ್ಟಿ, ರಾಘವೇಂದ್ರ ಕಾಮತ್ ಬರೆದಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT