ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾರ್ಲಿಂಗ್ ಕೃಷ್ಣ ಜನ್ಮದಿನಕ್ಕೆ ‘ದಿಲ್ ಪಸಂದ್’ ಸಿಹಿ

Last Updated 12 ಜೂನ್ 2022, 14:09 IST
ಅಕ್ಷರ ಗಾತ್ರ

ನಟ ಡಾರ್ಲಿಂಗ್‌ ಕೃಷ್ಣ ಅವರು 37 ವರ್ಷದ ಜನ್ಮದಿನ (ಜೂನ್‌ 12) ಸಂಭ್ರಮದಲ್ಲಿದ್ದಾರೆ. ಇದೇ ಅವರು ಅಭಿನಯದ ‘ದಿಲ್ ಪಸಂದ್’ ಚಿತ್ರದಗ್ಲಿಂಪ್ಸ್ ಬಿಡುಗಡೆಯಾಗಿದೆ.

ಭಾನುವಾರ ಮಧ್ಯಾಹ್ನ‘ದಿಲ್ ಪಸಂದ್’ ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆಯಾಗಿದ್ದು ಅಭಿಮಾನಿಗಳಿಗೆ ಇಷ್ಟವಾಗಿದೆ. ಇನ್ನು ಡಾರ್ಲಿಂಗ್‌ ಅವರಿಗೆ ಅಭಿಮಾನಿಗಳು ಸೇರಿದಂತೆ ಸಿನಿಮಾರಂಗದ ನಟ ನಟಿಯರು, ತಂತ್ರಜ್ಞರು ಸೇರಿದಂತೆ ಹಲವಾರು ಜನರು ಜನ್ಮದಿನದ ಶುಭಾಶಯಗಳನ್ನು ಹೇಳುತ್ತಿದ್ದಾರೆ.

ಈಗಾಗಲೇದಿಲ್ ಪಸಂದ್’ ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ. ಫಸ್ಟ್‌ಲುಕ್‌ನಲ್ಲಿ ಡಾರ್ಲಿಂಗ್‌ ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ಜೋಡಿಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ.

ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ‘ದಿಲ್ ಪಸಂದ್’ ಚಿತ್ರವನ್ನುಶಿವತೇಜಸ್ ನಿರ್ದೇಶನ ಮಾಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಜೋಡಿಯಾಗಿ ನಿಶ್ವಿಕಾ ನಾಯ್ಡು‌ ಹಾಗೂ ಮೇಘ ಶೆಟ್ಟಿ ನಟಿಸುತ್ತಿದ್ದಾರೆ. ಸಾಧುಕೋಕಿಲ,‌‌ ರಂಗಾಯಣ ರಘು, ತಬಲ‌ ನಾಣಿ, ಅರುಣ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ, ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT